Ezekiel · chapter 28 · verse 7
Ezekiel 28:7 in Kannada
ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
Igo, naanu ninna mele bhayankara vaada janaangagala aparichitarannu taruttene; avaru ninna jnyaanada sobagina mele viruddhavaagi kattiyannu hiriyuvaru; ninna prakaashavannu kedisuvaru.
Ezekiel 28:7 in English
- King James Version (KJV)
- Behold, therefore I will bring strangers upon thee, the terrible of the nations: and they shall draw their swords against the beauty of thy wisdom, and they shall defile thy brightness.
- World English Bible (WEB)
- therefore, behold, I will bring strangers on you, the terrible of the nations. They will draw their swords against the beauty of your wisdom. They will defile your brightness.
- American Standard Version (ASV)
- therefore, behold, I will bring strangers upon thee, the terrible of the nations; and they shall draw their swords against the beauty of thy wisdom, and they shall defile thy brightness.
- Bible in Basic English (BBE)
- See, I am sending against you strange men, feared among the nations: they will let loose their swords against your bright wisdom, they will make your glory a common thing.
- Darby Translation (DBY)
- therefore behold, I will bring strangers upon thee, the terrible of the nations; and they shall draw their swords against the beauty of thy wisdom, and they shall tarnish thy brightness.
- Webster's Bible (WBS)
- Behold, therefore I will bring strangers upon thee, the terrible of the nations: and they shall draw their swords against the beauty of thy wisdom, and they shall defile thy brightness.
- Young's Literal Translation (YLT)
- Therefore, lo, I am bringing in against thee strangers, The terrible of the nations, And they have drawn out their swords Against the beauty of thy wisdom, And they have pierced thy brightness.
Read in context
- 5ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
- 6ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
- 7ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
- 8ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
- 9ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
Cross references
- Ezekiel 31:12 ಯೆಹೆಜ್ಕೇಲನು 31:12ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
- Ezekiel 32:12 ಯೆಹೆಜ್ಕೇಲನು 32:12ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.
- Ezekiel 30:11 ಯೆಹೆಜ್ಕೇಲನು 30:11ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
- Habakkuk 1:6–8 ಹಬಕ್ಕೂಕ 1:6–8ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು. ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ. ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು.
- Isaiah 23:8–9 ಯೆಶಾಯ 23:8–9ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು? ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
- Daniel 7:7 ದಾನಿಯೇಲನು 7:7ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
- Deuteronomy 28:49–50 ಧರ್ಮೋಪದೇಶಕಾಂಡ 28:49–50ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
- Ezekiel 26:7–14 ಯೆಹೆಜ್ಕೇಲನು 26:7–14ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ. ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು; ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು. ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು. ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು. ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು. ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ. ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 25:3–4 ಯೆಶಾಯ 25:3–4ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು. ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?