Ezekiel · chapter 28 · verse 8
Ezekiel 28:8 in Kannada
ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
Ninnannu paataalakke tallibiduvaru, samudragala madhyadalli hatavaadavara haage neenu saayuve.
Ezekiel 28:8 in English
- King James Version (KJV)
- They shall bring thee down to the pit, and thou shalt die the deaths of [them that are] slain in the midst of the seas.
- World English Bible (WEB)
- They will bring you down to the pit. You will die the death of those who are slain in the heart of the seas.
- American Standard Version (ASV)
- They shall bring thee down to the pit; and thou shalt die the death of them that are slain, in the heart of the seas.
- Bible in Basic English (BBE)
- They will send you down to the underworld, and your death will be the death of those who are put to the sword in the heart of the seas.
- Darby Translation (DBY)
- They shall bring thee down to the pit, and thou shalt die the deaths of those that are slain in the heart of the seas.
- Webster's Bible (WBS)
- They shall bring thee down to the pit, and thou shalt die the deaths of [them that are] slain in the midst of the seas.
- Young's Literal Translation (YLT)
- To destruction they bring thee down, Thou diest by the deaths of the wounded, in the heart of the seas.
Read in context
- 6ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
- 7ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
- 8ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
- 9ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
- 10ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
Cross references
- Ezekiel 27:26–27 ಯೆಹೆಜ್ಕೇಲನು 27:26–27ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
- Ezekiel 27:34 ಯೆಹೆಜ್ಕೇಲನು 27:34ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
- Proverbs 28:17 ಜ್ಞಾನೋಕ್ತಿಗಳು 28:17ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
- Job 33:18 ಯೋಬನು 33:18ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.
- Psalm 28:1 ಕೀರ್ತನೆಗಳು 28:1ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
- Ezekiel 32:18–30 ಯೆಹೆಜ್ಕೇಲನು 32:18–30ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು. ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು. ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ. ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ. ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ. ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು. ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ. ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು. ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು. ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ. ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು. ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
- Proverbs 1:12 ಜ್ಞಾನೋಕ್ತಿಗಳು 1:12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- Psalm 88:4–5 ಕೀರ್ತನೆಗಳು 88:4–5ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
- Job 17:16 ಯೋಬನು 17:16ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
- Psalm 30:9 ಕೀರ್ತನೆಗಳು 30:9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- Isaiah 38:17 ಯೆಶಾಯ 38:17ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
- Psalm 55:15 ಕೀರ್ತನೆಗಳು 55:15ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.