Ezekiel · chapter 29 · verse 16
Ezekiel 29:16 in Kannada
ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
Innu adu israayel vanshadavara bharavasavaagade, ivaru avara kadege nodidaaga akramavannu jnyaapakakke tarabekaagiruvadilla; aaga naane deva raada kartanendu avarige tiliyuvadu.
Ezekiel 29:16 in English
- King James Version (KJV)
- And it shall be no more the confidence of the house of Israel, which bringeth [their] iniquity to remembrance, when they shall look after them: but they shall know that I [am] the Lord GOD.
- World English Bible (WEB)
- It will no longer be the confidence of the house of Israel, bringing iniquity to memory, when they turn to look after them. Then they will know that I am the Lord GOD.”’”
- American Standard Version (ASV)
- And it shall be no more the confidence of the house of Israel, bringing iniquity to remembrance, when they turn to look after them: and they shall know that I am the Lord Jehovah.
- Bible in Basic English (BBE)
- And Egypt will no longer be the hope of the children of Israel, causing sin to come to mind when their eyes are turned to them: and they will be certain that I am the Lord.
- Darby Translation (DBY)
- And it shall be no more the confidence of the house of Israel, bringing iniquity to remembrance, when they turn after them: and they shall know that I [am] the Lord Jehovah.
- Webster's Bible (WBS)
- And it shall be no more the confidence of the house of Israel, which bringeth [their] iniquity to remembrance, when they shall look after them: but they shall know that I [am] the Lord GOD.
- Young's Literal Translation (YLT)
- And it is no more to the house of Israel for a confidence, Bringing iniquity to remembrance, By their turning after them, And they have known that I [am] the Lord Jehovah.'
Read in context
- 14ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
- 15ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
- 16ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
- 17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
- 18ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
Cross references
- Isaiah 20:5 ಯೆಶಾಯ 20:5ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Hosea 8:13 ಹೋಶೇಯ 8:13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
- Ezekiel 29:6–7 ಯೆಹೆಜ್ಕೇಲನು 29:6–7ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು. ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- Isaiah 30:1–6 ಯೆಶಾಯ 30:1–6ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
- Psalm 25:7 ಕೀರ್ತನೆಗಳು 25:7ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
- Lamentations 4:17 ಪ್ರಲಾಪಗಳು 4:17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
- Isaiah 64:9 ಯೆಶಾಯ 64:9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
- Jeremiah 2:36–37 ಯೆರೆಮೀಯ 2:36–37ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ. ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Jeremiah 14:10 ಯೆರೆಮೀಯ 14:10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
- Ezekiel 21:23 ಯೆಹೆಜ್ಕೇಲನು 21:23ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.
- Ezekiel 28:26 ಯೆಹೆಜ್ಕೇಲನು 28:26ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
- Ezekiel 29:21 ಯೆಹೆಜ್ಕೇಲನು 29:21ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.