Ezekiel · chapter 29 · verse 8
Ezekiel 29:8 in Kannada
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
Aadadarinda devaraada kartanu heege helu ttaane--igo, naanu ninna mele kattiyannu taruttene. Manushyarannoo mrugagalannoo ninnolaginda kadidubiduttene.
Ezekiel 29:8 in English
- King James Version (KJV)
- Therefore thus saith the Lord GOD; Behold, I will bring a sword upon thee, and cut off man and beast out of thee.
- World English Bible (WEB)
- “‘Therefore the Lord GOD says: “Behold, I will bring a sword on you, and will cut off man and animal from you.
- American Standard Version (ASV)
- Therefore thus saith the Lord Jehovah: Behold, I will bring a sword upon thee, and will cut off from thee man and beast.
- Bible in Basic English (BBE)
- For this cause the Lord has said: See, I am sending a sword on you, cutting off from you man and beast.
- Darby Translation (DBY)
- Therefore thus saith the Lord Jehovah: Behold, I will bring a sword upon thee, and cut off man and beast from thee.
- Webster's Bible (WBS)
- Therefore thus saith the Lord GOD; Behold, I will bring a sword upon thee, and cut off man and beast out of thee.
- Young's Literal Translation (YLT)
- Therefore, thus said the Lord Jehovah: Lo, I am bringing in against thee a sword, And have cut off from thee man and beast.
Read in context
- 6ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.
- 7ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- 8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
- 9ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.
- 10ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
Cross references
- Ezekiel 14:17 ಯೆಹೆಜ್ಕೇಲನು 14:17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
- Ezekiel 32:10–13 ಯೆಹೆಜ್ಕೇಲನು 32:10–13ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು; ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು. ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.
- Ezekiel 25:13 ಯೆಹೆಜ್ಕೇಲನು 25:13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.
- Genesis 6:7 ಆದಿಕಾಂಡ 6:7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
- Jeremiah 46:13–26 ಯೆರೆಮೀಯ 46:13–26ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು. ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ. ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ. ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು. ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ. ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು. ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು. ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ. ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು. ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು. ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ. ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು. ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ; ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
- Jeremiah 32:43 ಯೆರೆಮೀಯ 32:43ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Jeremiah 7:20 ಯೆರೆಮೀಯ 7:20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
- Ezekiel 30:4 ಯೆಹೆಜ್ಕೇಲನು 30:4ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
- Ezekiel 30:10 ಯೆಹೆಜ್ಕೇಲನು 30:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
- Ezekiel 29:19–20 ಯೆಹೆಜ್ಕೇಲನು 29:19–20ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು. ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.