Ezekiel · chapter 3 · verse 14
Ezekiel 3:14 in Kannada
ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
Heege aatmanu nannannu ettikondu hodanu; naanu kahiyalliyoo aatmana uriya lliyoo hodenu; adare kartana kai nanna mele balavaagittu.
Ezekiel 3:14 in English
- King James Version (KJV)
- So the spirit lifted me up, and took me away, and I went in bitterness, in the heat of my spirit; but the hand of the LORD was strong upon me.
- World English Bible (WEB)
- So the Spirit lifted me up, and took me away; and I went in bitterness, in the heat of my spirit; and the LORD’s hand was strong on me.
- American Standard Version (ASV)
- So the Spirit lifted me up, and took me away; and I went in bitterness, in the heat of my spirit; and the hand of Jehovah was strong upon me.
- Bible in Basic English (BBE)
- And the wind, lifting me up, took me away: and I went in the heat of my spirit, and the hand of the Lord was strong on me.
- Darby Translation (DBY)
- And the Spirit lifted me up, and took me away; and I went in bitterness, in the heat of my spirit, and the hand of Jehovah was strong upon me.
- Webster's Bible (WBS)
- So the spirit lifted me up, and took me away, and I went in bitterness, in the heat of my spirit; but the hand of the LORD was strong upon me.
- Young's Literal Translation (YLT)
- And a spirit hath lifted me up, and doth take me away, and I go bitterly, in the heat of my spirit, and the hand of Jehovah on me [is] strong.
Read in context
- 12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
- 13ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.
- 14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
- 15ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
- 16ಏಳು ದಿವಸಗಳಾದ ಮೇಲೆ ಆದದ್ದೇನಂದರೆ, ಕರ್ತನ ವಾಕ್ಯವು ಹೀಗೆ ಹೇಳುತ್ತಾ ನನ್ನ ಕಡೆಗೆ ಬಂದು --
Cross references
- Ezekiel 37:1 ಯೆಹೆಜ್ಕೇಲನು 37:1ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
- Jeremiah 20:7–9 ಯೆರೆಮೀಯ 20:7–9ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ. ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು. ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
- 2 Kings 3:15 2 ಅರಸುಗಳು 3:15ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
- Ezekiel 8:3 ಯೆಹೆಜ್ಕೇಲನು 8:3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- 2 Kings 2:16 2 ಅರಸುಗಳು 2:16ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
- Ezekiel 1:3 ಯೆಹೆಜ್ಕೇಲನು 1:3ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- Ezekiel 3:12 ಯೆಹೆಜ್ಕೇಲನು 3:12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
- Jeremiah 6:11 ಯೆರೆಮೀಯ 6:11ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
- Jeremiah 20:14–18 ಯೆರೆಮೀಯ 20:14–18ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ. ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ! ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ? ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
- Numbers 11:11–19 ಅರಣ್ಯಕಾಂಡ 11:11–19ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ? ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ? ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ. ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ. ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ. ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು. ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ. ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ.
- 1 Kings 18:46 1 ಅರಸುಗಳು 18:46ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- John 4:9 ಯೋಹಾನನು 4:9ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.