Ezekiel · chapter 3 · verse 26
Ezekiel 3:26 in Kannada
ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
Idallade naali geyu ninna angalakke hattuva haage maaduvenu. Aaga neenu mookanaagi avarannu gadarisuva vanaagalaare; yaakandare avaru tirugi beeluva maneyavaraagiddaare.aadare naanu ninna sangada maatanaaduvaaga naanu ninna baayannu tere yuvenu. Aaga neenu avarige helabekaadaddenandare--devaraada kartanu heege heluttaane --keluvavanu kelali, keladavanu kelade irali. Avaru tirugi beeluva maneyavaraagiddaare.
Ezekiel 3:26 in English
- King James Version (KJV)
- And I will make thy tongue cleave to the roof of thy mouth, that thou shalt be dumb, and shalt not be to them a reprover: for they [are] a rebellious house.
- World English Bible (WEB)
- I will make your tongue stick to the roof of your mouth so that you will be mute and will not be able to correct them, for they are a rebellious house.
- American Standard Version (ASV)
- and I will make thy tongue cleave to the roof of thy mouth, that thou shalt be dumb, and shalt not be to them a reprover; for they are a rebellious house.
- Bible in Basic English (BBE)
- And I will make your tongue fixed to the roof of your mouth, so that you have no voice and may not make protests to them: for they are an uncontrolled people.
- Darby Translation (DBY)
- And I will make thy tongue cleave to the roof of thy mouth, that thou shalt be dumb, and shalt not be to them a reprover; for they are a rebellious house.
- Webster's Bible (WBS)
- And I will make thy tongue cleave to the roof of thy mouth, that thou shalt be dumb, and shalt not be to them a reprover: for they [are] a rebellious house.
- Young's Literal Translation (YLT)
- and thy tongue I cause to cleave unto thy palate, and thou hast been dumb, and art not to them for a reprover, for a rebellious house [are] they.
Read in context
- 24ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.
- 25ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.
- 26ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- 27ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
Cross references
- Ezekiel 24:27 ಯೆಹೆಜ್ಕೇಲನು 24:27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Amos 8:11–12 ಆಮೋಸ 8:11–12ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ. ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
- Micah 3:6–7 ಮೀಕ 3:6–7ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು. ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
- Psalm 51:15 ಕೀರ್ತನೆಗಳು 51:15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
- Psalm 137:6 ಕೀರ್ತನೆಗಳು 137:6ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- Luke 1:20–22 ಲೂಕನು 1:20–22ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು. ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು. ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
- Jeremiah 1:17 ಯೆರೆಮೀಯ 1:17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
- Amos 5:10 ಆಮೋಸ 5:10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
- Lamentations 2:9 ಪ್ರಲಾಪಗಳು 2:9ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
- Psalm 36:11–12 ಕೀರ್ತನೆಗಳು 36:11–12ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ. ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Ezekiel 2:3–8 ಯೆಹೆಜ್ಕೇಲನು 2:3–8ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ. ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು. ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು. ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ. ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ. ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.