Ezekiel · chapter 3 · verse 6
Ezekiel 3:6 in Kannada
ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
Neenu kathina bhaasheyalli sojigada maatugalannaaduvavara balige kaluhisalpattavanalla; inthavara kadege naanu ninnannu kaluhisidda pakshadalli nishchayavaagi avaru ninna maatige kivigoduttiddaru.
Ezekiel 3:6 in English
- King James Version (KJV)
- Not to many people of a strange speech and of an hard language, whose words thou canst not understand. Surely, had I sent thee to them, they would have hearkened unto thee.
- World English Bible (WEB)
- not to many peoples of a strange speech and of a hard language, whose words you can’t understand. Surely, if I sent you to them, they would listen to you.
- American Standard Version (ASV)
- not to many peoples of a strange speech and of a hard language, whose words thou canst not understand. Surely, if I sent thee to them, they would hearken unto thee.
- Bible in Basic English (BBE)
- Not to a number of peoples whose talk is strange and whose language is hard and whose words are not clear to you. Truly, if I sent you to them they would give ear to you.
- Darby Translation (DBY)
- not to many peoples of strange language and of difficult speech, whose words thou canst not understand: had I sent thee to them, would they not hearken unto thee?
- Webster's Bible (WBS)
- Not to many people of a strange speech and of a hard language, whose words thou canst not understand. Surely, had I sent thee to them, they would have hearkened to thee.
- Young's Literal Translation (YLT)
- not unto many peoples, deep of lip and heavy of tongue, whose words thou dost not understand. If I had not sent thee unto them — they, they do hearken unto thee,
Read in context
- 4ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.
- 5ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ.
- 6ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
- 7ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.
- 8ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ.
Cross references
- Romans 9:30–33 ರೋಮಾಪುರದವರಿಗೆ 9:30–33ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ. ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ. ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Jonah 3:5–10 ಯೋನ 3:5–10ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ. ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Matthew 11:20–24 ಮತ್ತಾಯನು 11:20–24ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ -- ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು. ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು. ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು. ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
- Matthew 12:41–42 ಮತ್ತಾಯನು 12:41–42ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ. ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
- Luke 11:30–32 ಲೂಕನು 11:30–32ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು. ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ. ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.
- Acts 27:28 ಅಪೊಸ್ತಲರ ಕೃತ್ಯಗಳು 27:28ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.