Ezekiel · chapter 3 · verse 8
Ezekiel 3:8 in Kannada
ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ.
Igo, naanu ninna mukhavannu avara mukhagala edurige kathina maadiddene; mattu ninna haneyannu avara hanegala eduraagi balapadisiddene.
Ezekiel 3:8 in English
- King James Version (KJV)
- Behold, I have made thy face strong against their faces, and thy forehead strong against their foreheads.
- World English Bible (WEB)
- Behold, I have made your face hard against their faces, and your forehead hard against their foreheads.
- American Standard Version (ASV)
- Behold, I have made thy face hard against their faces, and thy forehead hard against their foreheads.
- Bible in Basic English (BBE)
- See, I have made your face hard against their faces, and your brow hard against their brows.
- Darby Translation (DBY)
- Behold, I have made thy face hard against their faces, and thy forehead hard against their foreheads.
- Webster's Bible (WBS)
- Behold, I have made thy face strong against their faces, and thy forehead strong against their foreheads.
- Young's Literal Translation (YLT)
- 'Lo, I have made thy face strong against their face, and thy forehead strong against their forehead.
Read in context
- 6ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
- 7ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.
- 8ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ.
- 9ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
- 10ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.
Cross references
- Jeremiah 1:18 ಯೆರೆಮೀಯ 1:18ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- Acts 7:51–56 ಅಪೊಸ್ತಲರ ಕೃತ್ಯಗಳು 7:51–56ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ. ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು. ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು. ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು-- ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
- Micah 3:8 ಮೀಕ 3:8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
- Exodus 4:15–16 ವಿಮೋಚನಕಾಂಡ 4:15–16ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು. ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
- 1 Kings 21:20 1 ಅರಸುಗಳು 21:20ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
- Exodus 11:4–8 ವಿಮೋಚನಕಾಂಡ 11:4–8ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು. ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು. ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ. ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ. ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
- Isaiah 50:7 ಯೆಶಾಯ 50:7ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
- Hebrews 11:27 ಇಬ್ರಿಯರಿಗೆ 11:27ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
- Hebrews 11:32–37 ಇಬ್ರಿಯರಿಗೆ 11:32–37ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು. ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು. ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು. ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು. ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು. ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
- Jeremiah 15:20 ಯೆರೆಮೀಯ 15:20ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.