Ezekiel · chapter 31 · verse 16
Ezekiel 31:16 in Kannada
ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.
Naanu adannu kunige iliyuvavara jotege serisabekendu paataalakke tallibittaaga adu bidda shabdakke sakala janaangagalu nadugidavu; adho lokakke paalaada edenina ellaa maragalu, lebanonina uttamottamavaada vrukshagalu, neeru kudiyuvavugalellaa kelagina seemeyalli santaisi kondavu.
Ezekiel 31:16 in English
- King James Version (KJV)
- I made the nations to shake at the sound of his fall, when I cast him down to hell with them that descend into the pit: and all the trees of Eden, the choice and best of Lebanon, all that drink water, shall be comforted in the nether parts of the earth.
- World English Bible (WEB)
- I made the nations to shake at the sound of his fall, when I cast him down to Sheol with those who descend into the pit. All the trees of Eden, the choice and best of Lebanon, all that drink water, were comforted in the lower parts of the earth.
- American Standard Version (ASV)
- I made the nations to shake at the sound of his fall, when I cast him down to Sheol with them that descend into the pit; and all the trees of Eden, the choice and best of Lebanon, all that drink water, were comforted in the nether parts of the earth.
- Bible in Basic English (BBE)
- I will send shaking on the nations at the sound of his fall, when I send him down to the underworld with those who go down into the deep: and on earth they will be comforting themselves, all the trees of Eden, the best of Lebanon, even all the watered ones.
- Darby Translation (DBY)
- I made the nations to shake at the sound of his fall, when I cast him down to Sheol, with them that go down into the pit; and all the trees of Eden, the choice and best of Lebanon, all that drink water, were comforted in the lower parts of the earth.
- Webster's Bible (WBS)
- I made the nations to shake at the sound of his fall, when I cast him down to the grave with them that descend into the pit: and all the trees of Eden, the choice and best of Lebanon, all that drink water, shall be comforted in the nether parts of the earth.
- Young's Literal Translation (YLT)
- From the sound of his fall I have caused nations to shake, In My causing him to go down to sheol, With those going down to the pit, And comforted in the earth — the lower part, are all trees of Eden, The choice and the good of Lebanon, All drinking waters.
Read in context
- 14ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.
- 15ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.
- 16ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.
- 17ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 18ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Cross references
- Isaiah 14:15 ಯೆಶಾಯ 14:15ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
- Isaiah 14:8 ಯೆಶಾಯ 14:8ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
- Ezekiel 26:15 ಯೆಹೆಜ್ಕೇಲನು 26:15ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ?
- Ezekiel 27:28 ಯೆಹೆಜ್ಕೇಲನು 27:28ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
- Ezekiel 31:9 ಯೆಹೆಜ್ಕೇಲನು 31:9ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.
- Haggai 2:7 ಹಗ್ಗಾಯ 2:7ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Habakkuk 2:17 ಹಬಕ್ಕೂಕ 2:17ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
- Ezekiel 26:10 ಯೆಹೆಜ್ಕೇಲನು 26:10ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
- Hebrews 12:26–27 ಇಬ್ರಿಯರಿಗೆ 12:26–27ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ. ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
- Revelation 18:9–24 ಪ್ರಕಟನೆ 18:9–24ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು. ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Ezekiel 32:18–32 ಯೆಹೆಜ್ಕೇಲನು 32:18–32ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು. ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು. ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ. ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ. ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ. ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು. ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ. ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು. ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು. ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ. ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು. ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ. ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 31:18 ಯೆಹೆಜ್ಕೇಲನು 31:18ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- nations · H1471גּוֹי gôwy
- shake · H7493רָעַשׁ râʻash
- sound · H6963קוֹל qôwl
- fall · H4658מַפֶּלֶת mappeleth
- down · H3381יָרַד yârad
- hell · H7585שְׁאוֹל shᵉʼôwl
- descend · H3381יָרַד yârad
- pit · H953בּוֹר bôwr
- trees · H6086עֵץ ʻêts
- Eden · H5731עֵדֶן ʻÊden
- choice · H4005מִבְחָר mibchâr
- best · H2896טוֹב ṭôwb
- Lebanon · H3844לְבָנוֹן Lᵉbânôwn
- drink · H8354שָׁתָה shâthâh
- water · H4325מַיִם mayim
- comforted · H5162נָחַם nâcham
- parts · H8482תַּחְתִּי tachtîy
- earth · H776אֶרֶץ ʼerets