Ezekiel · chapter 31 · verse 2
Ezekiel 31:2 in Kannada
ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ?
Manushyaputrane, aiguptada arasanaada pharohanondige mattu avana samoohadondige maata naadi--neenu ninna doddastikeyalli yaarige samaananaagiruve?
Ezekiel 31:2 in English
- King James Version (KJV)
- Son of man, speak unto Pharaoh king of Egypt, and to his multitude; Whom art thou like in thy greatness?
- World English Bible (WEB)
- “Son of man, tell Pharaoh king of Egypt and his multitude: ‘Whom are you like in your greatness?
- American Standard Version (ASV)
- Son of man, say unto Pharaoh king of Egypt, and to his multitude: Whom art thou like in thy greatness?
- Bible in Basic English (BBE)
- Son of man, say to Pharaoh, king of Egypt, and to his people; Whom are you like in your great power?
- Darby Translation (DBY)
- Son of man, say unto Pharaoh king of Egypt, and to his multitude: Whom art thou like in thy greatness?
- Webster's Bible (WBS)
- Son of man, speak to Pharaoh king of Egypt, and to his multitude; Whom art thou like in thy greatness?
- Young's Literal Translation (YLT)
- 'Son of man, say unto Pharaoh king of Egypt, and unto his multitude: To whom hast thou been like in thy greatness?
Read in context
- 1ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 2ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ?
- 3ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
- 4ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು.
Cross references
- Ezekiel 29:19 ಯೆಹೆಜ್ಕೇಲನು 29:19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
- Ezekiel 31:18 ಯೆಹೆಜ್ಕೇಲನು 31:18ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 30:10 ಯೆಹೆಜ್ಕೇಲನು 30:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
- Revelation 10:11 ಪ್ರಕಟನೆ 10:11ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
- Nahum 3:8–10 ನಹೂಮ 3:8–10ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು. ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು. ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Isaiah 14:13–14 ಯೆಶಾಯ 14:13–14ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
- Jeremiah 1:17 ಯೆರೆಮೀಯ 1:17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.