Ezekiel · chapter 31 · verse 5
Ezekiel 31:5 in Kannada
ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
Aada darinda adara ettaravu bayalina ellaa mara galiginta ettaravaagittu; adu habbiddadarinda mattu hechchu neerina deseyinda adara kombegalu adhikavaadavu; adara rembegalu uddavaadavu.
Ezekiel 31:5 in English
- King James Version (KJV)
- Therefore his height was exalted above all the trees of the field, and his boughs were multiplied, and his branches became long because of the multitude of waters, when he shot forth.
- World English Bible (WEB)
- Therefore its stature was exalted above all the trees of the field; and its boughs were multiplied. Its branches became long by reason of many waters, when it spread them out.
- American Standard Version (ASV)
- Therefore its stature was exalted above all the trees of the field; and its boughs were multiplied, and its branches became long by reason of many waters, when it shot [them] forth.
- Bible in Basic English (BBE)
- In this way it became taller than all the trees of the field; and its branches were increased and its arms became long because of the great waters.
- Darby Translation (DBY)
- Therefore his height was exalted above all the trees of the field, and his boughs were multiplied, and his branches became long, because of great waters, when he shot forth.
- Webster's Bible (WBS)
- Therefore his hight was exalted above all the trees of the field, and his boughs were multiplied, and his branches became long because of the multitude of waters, when he shot forth.
- Young's Literal Translation (YLT)
- Therefore higher hath been his stature than all trees of the field, And multiplied are his boughs, and long are his branches, Because of many waters in his shooting forth,
Read in context
- 3ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
- 4ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು.
- 5ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
- 6ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
- 7ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು.
Cross references
- Daniel 4:11 ದಾನಿಯೇಲನು 4:11ಆ ಮರವು ಬೆಳೆದು ಬಲವಾಯಿತು; ಅದರ ಎತ್ತರವು ಆಕಾಶಕ್ಕೂ ಅದು ಭೂಲೋಕದ ಕಟ್ಟಕಡೆಯವರೆಗೂ ಕಾಣಿಸುತ್ತಿತ್ತು.
- Ezekiel 17:5 ಯೆಹೆಜ್ಕೇಲನು 17:5ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು.
- Isaiah 36:4 ಯೆಶಾಯ 36:4ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Isaiah 37:11–13 ಯೆಶಾಯ 37:11–13ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ? ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ? ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
- Isaiah 36:18–19 ಯೆಶಾಯ 36:18–19ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ? ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
- Psalm 37:35–36 ಕೀರ್ತನೆಗಳು 37:35–36ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು. ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Isaiah 10:8–14 ಯೆಶಾಯ 10:8–14ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.