Ezekiel · chapter 32 · verse 11
Ezekiel 32:11 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;
Devaraada kartanu heege heluttaane--baabelina arasana kattiyu ninna mele baruvadu;
Ezekiel 32:11 in English
- King James Version (KJV)
- For thus saith the Lord GOD; The sword of the king of Babylon shall come upon thee.
- World English Bible (WEB)
- For the Lord GOD says: “The sword of the king of Babylon will come on you.
- American Standard Version (ASV)
- For thus saith the Lord Jehovah: The sword of the king of Babylon shall come upon thee.
- Bible in Basic English (BBE)
- For this is what the Lord has said: The sword of the king of Babylon will come on you.
- Darby Translation (DBY)
- For thus saith the Lord Jehovah: The sword of the king of Babylon shall come upon thee.
- Webster's Bible (WBS)
- For thus saith the Lord God; The sword of the king of Babylon shall come upon thee.
- Young's Literal Translation (YLT)
- For thus said the Lord Jehovah: A sword of the king of Babylon entereth thee,
Read in context
- 9ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
- 10ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
- 11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;
- 12ಪರಾಕ್ರಮ ಶಾಲಿಗಳ ಕತ್ತಿಗಳಿಂದ ಜನಾಂಗಗಳಲ್ಲಿ ಭಯಂಕರ ರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು; ಅವರು ಐಗುಪ್ತದ ಮಹತ್ತನ್ನು ಕೆಡಿಸು ವರು; ಅದರ ಜನಸಮೂಹವೆಲ್ಲಾ ಹಾಳಾಗುವದು.
- 13ನಾನು ಆ ಬಹುಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು; ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಕಾಲಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವದಿಲ್ಲ.
Cross references
- Jeremiah 43:10 ಯೆರೆಮೀಯ 43:10ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
- Ezekiel 30:22–25 ಯೆಹೆಜ್ಕೇಲನು 30:22–25ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ. ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು. ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 46:13 ಯೆರೆಮೀಯ 46:13ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.
- Ezekiel 30:4 ಯೆಹೆಜ್ಕೇಲನು 30:4ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
- Jeremiah 46:24–26 ಯೆರೆಮೀಯ 46:24–26ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು. ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ; ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
- Ezekiel 26:7 ಯೆಹೆಜ್ಕೇಲನು 26:7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.