Ezekiel · chapter 32 · verse 22
Ezekiel 32:22 in Kannada
ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.
Alli ashshoorya mattu adara ellaa gumpu iruvadu; suttaloo adara samaadhigaliruvavu; avarellaroo kattiyinda biddu hataraadavare.
Ezekiel 32:22 in English
- King James Version (KJV)
- Asshur [is] there and all her company: his graves [are] about him: all of them slain, fallen by the sword:
- World English Bible (WEB)
- “Asshur is there with all her company. Her graves are all around her. All of them are slain, fallen by the sword,
- American Standard Version (ASV)
- Asshur is there and all her company; her graves are round about her; all of them slain, fallen by the sword;
- Bible in Basic English (BBE)
- There is Asshur and all her army, round about her last resting-place: all of them put to death by the sword:
- Darby Translation (DBY)
- There is Asshur and all his assemblage, his graves round about him: all of them slain, fallen by the sword;
- Webster's Bible (WBS)
- Asshur [is] there and all her company: his graves [are] about him: all of them slain, fallen by the sword:
- Young's Literal Translation (YLT)
- There [is] Asshur, and all her assembly, Round about him [are] his graves, All of them [are] wounded, who are falling by sword,
Read in context
- 20ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.
- 21ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.
- 22ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.
- 23ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.
- 24ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
Cross references
- Ezekiel 32:26 ಯೆಹೆಜ್ಕೇಲನು 32:26ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು.
- Ezekiel 32:24 ಯೆಹೆಜ್ಕೇಲನು 32:24ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
- Ezekiel 32:29–30 ಯೆಹೆಜ್ಕೇಲನು 32:29–30ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು. ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.
- Nahum 1:7–12 ನಹೂಮ 1:7–12ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು. ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು. ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು. ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು. ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ. ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
- Psalm 83:8–10 ಕೀರ್ತನೆಗಳು 83:8–10ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ. ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು. ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- Nahum 3:1–19 ನಹೂಮ 3:1–19ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ. ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು. ಸವಾರನು ಹತ್ತುತ್ತಾನೆ, ಕತ್ತಿಗಳು ಮಿಂಚು ತ್ತವೆ. ಈಟಿಗಳು ಥಳಥಳಿಸುತ್ತವೆ, ಹತವಾದವರು ಬಹಳ; ಹೆಣಗಳು ಬಹಳ; ಶವಗಳಿಗೆ ಅಂತ್ಯವೇ ಇಲ್ಲ; ಅವರು ಶವಗಳ ಮೇಲೆ ಎಡವುತ್ತಾರೆ. ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ? ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ. ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ. ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು. ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು. ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು. ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು. ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ. ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು. ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು. ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು. ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು. ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ. ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ; ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು? ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Numbers 24:24 ಅರಣ್ಯಕಾಂಡ 24:24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Isaiah 37:36–38 ಯೆಶಾಯ 37:36–38ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು. ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು. ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
- Ezekiel 31:3–18 ಯೆಹೆಜ್ಕೇಲನು 31:3–18ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು. ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು. ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ. ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ. ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು. ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು; ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು. ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು. ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ. ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.