Ezekiel · chapter 32 · verse 9
Ezekiel 32:9 in Kannada
ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
Idallade janaangagalolage neenu ariyada deshagalalli, ninna naashanavannu prasiddhipadisi, aneka janagala hrudayadalli galibili ebbisuvenu.
Ezekiel 32:9 in English
- King James Version (KJV)
- I will also vex the hearts of many people, when I shall bring thy destruction among the nations, into the countries which thou hast not known.
- World English Bible (WEB)
- “I will also trouble the hearts of many peoples, when I bring your destruction among the nations, into the countries which you have not known.
- American Standard Version (ASV)
- I will also vex the hearts of many peoples, when I shall bring thy destruction among the nations, into the countries which thou hast not known.
- Bible in Basic English (BBE)
- And the hearts of numbers of peoples will be troubled, when I send your prisoners among the nations, into a country which is strange to you.
- Darby Translation (DBY)
- And I will vex the heart of many peoples, when I bring [the news of] thy destruction among the nations, into the countries that thou hast not known.
- Webster's Bible (WBS)
- I will also vex the hearts of many people, when I shall bring thy destruction among the nations, into the countries which thou hast not known.
- Young's Literal Translation (YLT)
- And I have vexed the heart of many peoples, In My bringing in thy destruction among nations, Unto lands that thou hast not known.
Read in context
- 7ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
- 8ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
- 9ಇದಲ್ಲದೆ ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ನಾಶನವನ್ನು ಪ್ರಸಿದ್ಧಿಪಡಿಸಿ, ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.
- 10ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
- 11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;
Cross references
- Revelation 18:10–15 ಪ್ರಕಟನೆ 18:10–15ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
- Ezekiel 29:12 ಯೆಹೆಜ್ಕೇಲನು 29:12ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
- Ezekiel 30:23 ಯೆಹೆಜ್ಕೇಲನು 30:23ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.
- Ezekiel 30:26 ಯೆಹೆಜ್ಕೇಲನು 30:26ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 25:15–25 ಯೆರೆಮೀಯ 25:15–25ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
- Revelation 11:18 ಪ್ರಕಟನೆ 11:18ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.