Ezekiel · chapter 33 · verse 9
Ezekiel 33:9 in Kannada
ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
Aadaagyoo neenu ondu vele dushtanannu avana dumaargagalinda tirugalu echcharisidaroo avanu tanna dushtamaargadinda tirugadiddare avana akramagalalliye saayuvanu; aadare neenu ninna praanavannu tappisikolluvi.
Ezekiel 33:9 in English
- King James Version (KJV)
- Nevertheless, if thou warn the wicked of his way to turn from it; if he do not turn from his way, he shall die in his iniquity; but thou hast delivered thy soul.
- World English Bible (WEB)
- Nevertheless, if you warn the wicked of his way to turn from it, and he doesn’t turn from his way; he will die in his iniquity, but you have delivered your soul.
- American Standard Version (ASV)
- Nevertheless, if thou warn the wicked of his way to turn from it, and he turn not from his way; he shall die in his iniquity, but thou hast delivered thy soul.
- Bible in Basic English (BBE)
- But if you make clear to the evil-doer the danger of his way for the purpose of turning him from it, and he is not turned from his way, death will overtake him in his evil-doing, but your life will be safe.
- Darby Translation (DBY)
- But if thou warn the wicked of his way to turn from it, and he do not turn from his way, he shall die in his iniquity; but thou hast delivered thy soul.
- Webster's Bible (WBS)
- Nevertheless, if thou shalt warn the wicked of his way to turn from it; if he shall not turn from his way, he shall die in his iniquity; but thou hast delivered thy soul.
- Young's Literal Translation (YLT)
- And thou, when thou hast warned the wicked of his way, to turn back from it, And he hath not turned back from his way, He in his iniquity doth die, And thou thy soul hast delivered.
Read in context
- 7ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
- 8ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.
- 9ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
- 10ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
- 11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
Cross references
- Ezekiel 3:19 ಯೆಹೆಜ್ಕೇಲನು 3:19ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
- Acts 20:26 ಅಪೊಸ್ತಲರ ಕೃತ್ಯಗಳು 20:26ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.
- Ezekiel 3:21 ಯೆಹೆಜ್ಕೇಲನು 3:21ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
- Proverbs 15:10 ಜ್ಞಾನೋಕ್ತಿಗಳು 15:10ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
- Ephesians 5:3–6 ಎಫೆಸದವರಿಗೆ 5:3–6ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು. ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ. ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ. ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- Acts 18:5–6 ಅಪೊಸ್ತಲರ ಕೃತ್ಯಗಳು 18:5–6ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು. ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Luke 12:47 ಲೂಕನು 12:47ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
- 2 Corinthians 2:15–17 2 ಕೊರಿಂಥದವರಿಗೆ 2:15–17ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ. ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ. ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.