Ezekiel · chapter 34 · verse 20
Ezekiel 34:20 in Kannada
ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
Aadadarinda devaraada kartanu nimage heege heluttaane-- igo, naanu, naane kobbida danakkoo mattu badakalaada danakkoo naduve nyaayateerisuttene.
Ezekiel 34:20 in English
- King James Version (KJV)
- Therefore thus saith the Lord GOD unto them; Behold, I, [even] I, will judge between the fat cattle and between the lean cattle.
- World English Bible (WEB)
- “Therefore the Lord GOD says to them: ‘Behold, I, even I, will judge between the fat sheep and the lean sheep.
- American Standard Version (ASV)
- Therefore thus saith the Lord Jehovah unto them: Behold, I, even I, will judge between the fat sheep and the lean sheep.
- Bible in Basic English (BBE)
- For this reason the Lord has said to them, Truly, I, even I, will be judge between the fat sheep and the thin sheep.
- Darby Translation (DBY)
- Therefore thus saith the Lord Jehovah unto them: Behold, [it is] I, and I will judge between the fat sheep and the lean sheep.
- Webster's Bible (WBS)
- Therefore thus saith the Lord GOD to them; Behold, I, even I, will judge between the fat cattle and between the lean cattle.
- Young's Literal Translation (YLT)
- Therefore, thus said the Lord Jehovah to them: Lo, I — even I, have judged between fat sheep and lean sheep.
Read in context
- 18ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
- 19ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು.
- 20ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
- 21ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
- 22ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.
Cross references
- Psalm 22:12–16 ಕೀರ್ತನೆಗಳು 22:12–16ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- Matthew 25:31–46 ಮತ್ತಾಯನು 25:31–46ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು; ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು; ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು. ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Ezekiel 34:10 ಯೆಹೆಜ್ಕೇಲನು 34:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
- Ezekiel 34:17 ಯೆಹೆಜ್ಕೇಲನು 34:17ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.