Ezekiel · chapter 34 · verse 21
Ezekiel 34:21 in Kannada
ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
Neevu avugalannu pakke mattu hegalugalinda nookuttaa durbalavaadavugalannu kombugalinda haayuttaa nanna mandeyannu doora chadurisi bittiri.
Ezekiel 34:21 in English
- King James Version (KJV)
- Because ye have thrust with side and with shoulder, and pushed all the diseased with your horns, till ye have scattered them abroad;
- World English Bible (WEB)
- Because you thrust with side and with shoulder, and push all the diseased with your horns, until you have scattered them abroad,
- American Standard Version (ASV)
- Because ye thrust with side and with shoulder, and push all the diseased with your horns, till ye have scattered them abroad;
- Bible in Basic English (BBE)
- Because you have been pushing with side and leg, pushing the diseased with your horns till they were sent away in every direction;
- Darby Translation (DBY)
- Because ye thrust with side and with shoulder, and push all the weak ones with your horns, till ye have scattered them abroad,
- Webster's Bible (WBS)
- Because ye have thrust with side and with shoulder, and pushed all the diseased with your horns, till ye have scattered them abroad;
- Young's Literal Translation (YLT)
- Because with side and with shoulder ye thrust away, And with your horns push all the diseased, Till ye have scattered them to the out-place,
Read in context
- 19ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವವು; ನಿನ್ನ ಕಾಲಿನಿಂದ ಕಲಕಿ ಬದಿಯಾದದ್ದನ್ನೇ ಕುಡಿಯುವವು.
- 20ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
- 21ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
- 22ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.
- 23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
Cross references
- Zechariah 11:16–17 ಜೆಕರ್ಯ 11:16–17ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು. ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Zechariah 11:5 ಜೆಕರ್ಯ 11:5ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
- Luke 13:14–16 ಲೂಕನು 13:14–16ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ? ಹಾಗಾದರೆ ಇಗೋ, ಅಬ್ರ ಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರುಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನ ದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೋ ಅಂದನು.
- Ezekiel 34:3–5 ಯೆಹೆಜ್ಕೇಲನು 34:3–5ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ, ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
- Deuteronomy 33:17 ಧರ್ಮೋಪದೇಶಕಾಂಡ 33:17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Daniel 8:3–10 ದಾನಿಯೇಲನು 8:3–10ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು. ನಾನು ಆಲೋಚಿ ಸಲಾಗಿ ಇಗೋ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು. ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು. ನಾನು ನೋಡಿದ ನದಿಯ ಹತ್ತಿರವಿದ್ದ ಎರಡು ಕೊಂಬಿನ ಟಗರಿನ ಬಳಿಗೆ ಅದು ಬಂದು ಪರಾಕ್ರಮದಿಂದ ರೋಷಗೊಂಡು ಅದರ ಬಳಿಗೆ ಓಡಿತು. ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ. ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು. ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು. ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು.