Ezekiel · chapter 34 · verse 22
Ezekiel 34:22 in Kannada
ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.
Aadadarinda naanu nanna mandeyannu kaapaaduttene; avu endendoo kolleyaagu vadilla; naanu danagala mattu pashugala madhye nyaayateerisuvenu.
Ezekiel 34:22 in English
- King James Version (KJV)
- Therefore will I save my flock, and they shall no more be a prey; and I will judge between cattle and cattle.
- World English Bible (WEB)
- therefore I will save my flock, and they will no more be a prey. I will judge between sheep and sheep.
- American Standard Version (ASV)
- therefore will I save my flock, and they shall no more be a prey; and I will judge between sheep and sheep.
- Bible in Basic English (BBE)
- I will make my flock safe, and they will no longer be taken away, and I will be judge between sheep and sheep.
- Darby Translation (DBY)
- — I will save my flock, that they may no more be a prey; and I will judge between sheep and sheep.
- Webster's Bible (WBS)
- Therefore will I save my flock, and they shall no more be a prey; and I will judge between cattle and cattle.
- Young's Literal Translation (YLT)
- And I have given safety to My flock, And they are not any more for prey, And I have judged between sheep and sheep.
Read in context
- 20ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ.
- 21ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
- 22ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.
- 23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
- 24ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
Cross references
- Psalm 72:12–14 ಕೀರ್ತನೆಗಳು 72:12–14ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು. ದರಿದ್ರನನ್ನೂ ಬಡವನನ್ನೂ ಕರುಣಿಸುವನು; ಬಡವರ ಪ್ರಾಣಗ ಳನ್ನು ರಕ್ಷಿಸುವನು. ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
- Jeremiah 23:2–3 ಯೆರೆಮೀಯ 23:2–3ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- Ezekiel 34:10 ಯೆಹೆಜ್ಕೇಲನು 34:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
- Zechariah 11:7–9 ಜೆಕರ್ಯ 11:7–9ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು. ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು. ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.