Ezekiel · chapter 35 · verse 2
Ezekiel 35:2 in Kannada
ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;
Manushyaputrane, neenu seyaar parvatakke abhimukhavaagi adakke virodhavaagi pravaadisu;
Ezekiel 35:2 in English
- King James Version (KJV)
- Son of man, set thy face against mount Seir, and prophesy against it,
- World English Bible (WEB)
- “Son of man, set your face against Mount Seir, and prophesy against it,
- American Standard Version (ASV)
- Son of man, set thy face against mount Seir, and prophesy against it,
- Bible in Basic English (BBE)
- Son of man, let your face be turned to Mount Seir, and be a prophet against it,
- Darby Translation (DBY)
- Son of man, set thy face against mount Seir, and prophesy against it,
- Webster's Bible (WBS)
- Son of man, set thy face against mount Seir, and prophesy against it,
- Young's Literal Translation (YLT)
- 'Son of man, set thy face against mount Seir, and prophesy against it,
Read in context
- 1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
- 2ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;
- 3ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
- 4ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವಿ; ಆಗ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
Cross references
- Ezekiel 25:8 ಯೆಹೆಜ್ಕೇಲನು 25:8ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
- Genesis 32:3 ಆದಿಕಾಂಡ 32:3ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
- Ezekiel 6:2 ಯೆಹೆಜ್ಕೇಲನು 6:2ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
- Ezekiel 20:46 ಯೆಹೆಜ್ಕೇಲನು 20:46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- Isaiah 63:1–6 ಯೆಶಾಯ 63:1–6ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು. ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು. ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು. ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
- Jeremiah 49:7–22 ಯೆರೆಮೀಯ 49:7–22ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ? ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ. ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ? ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು. ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ. ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ. ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ. ಕರ್ತನಿಂದ ನಾನು ಸುದ್ದಿಯನ್ನು ಕೇಳಿದ್ದೇನೆ; ಅನ್ಯಜನಾಂಗಗಳೊಳಗೆ ರಾಯಭಾರಿಯು ಕಳುಹಿಸಲ್ಪಟ್ಟಿದ್ದಾನೆ; ನೀವು ಒಟ್ಟು ಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ. ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು. ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು. ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
- 2 Chronicles 25:11–14 2 ಪೂರ್ವಕಾಲವೃತ್ತಾಂತ 25:11–14ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು. ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು. ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು. ಅಮಚ್ಯನು ಎದೋಮ್ಯರನ್ನು ಹೊಡೆದು ತಿರಿಗಿ ಬಂದ ತರುವಾಯ ಏನಾಯಿತಂದರೆ, ತಾನು ಸೇಯಾ ರನ ಮಕ್ಕಳ ದೇವರುಗಳನ್ನು ತಕ್ಕೊಂಡು ಬಂದು ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು ಅವುಗಳ ಮುಂದೆ ಅಡ್ಡಬಿದ್ದು ಅವುಗಳಿಗೆ ಧೂಪವನ್ನು ಸುಟ್ಟನು.
- Psalm 83:3–18 ಕೀರ್ತನೆಗಳು 83:3–18ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ. ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ. ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು. ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು. ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು. ಅವರು--ನಾವು ದೇವರ ನಿವಾಸಗಳನ್ನು ಸ್ವತಂತ್ರಿಸಿಕೊಳ್ಳೋಣ ಅನ್ನುತ್ತಾರೆ. ಓ ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು. ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು. ಓ ಕರ್ತನೇ, ನಿನ್ನ ನಾಮವನ್ನು ಅವರು ಹುಡುಕುವ ಹಾಗೆ ಅವರ ಮುಖಗಳನ್ನು ನಾಚಿಕೆ ಯಿಂದ ತುಂಬಿಸು. ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ. ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
- Ezekiel 25:2 ಯೆಹೆಜ್ಕೇಲನು 25:2ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;
- Deuteronomy 2:5 ಧರ್ಮೋಪದೇಶಕಾಂಡ 2:5ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
- Ephesians 6:19 ಎಫೆಸದವರಿಗೆ 6:19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Lamentations 4:21–22 ಪ್ರಲಾಪಗಳು 4:21–22ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು. ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.