Ezekiel · chapter 35 · verse 8
Ezekiel 35:8 in Kannada
ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು.
Adara parvatagalannu ninnavara henagalinda tumbi suvaru. Ninna kattiyinda hatavaadavaru ninna halla kollagalalliyoo beeluvaru.
Ezekiel 35:8 in English
- King James Version (KJV)
- And I will fill his mountains with his slain [men:] in thy hills, and in thy valleys, and in all thy rivers, shall they fall that are slain with the sword.
- World English Bible (WEB)
- I will fill its mountains with its slain. The slain with the sword will fall in your hills and in your valleys and in all your watercourses.
- American Standard Version (ASV)
- And I will fill its mountains with its slain: in thy hills and in thy valleys and in all thy watercourses shall they fall that are slain with the sword.
- Bible in Basic English (BBE)
- I will make his mountains full of those who have been put to death; in your valleys and in all your water-streams men will be falling by the sword.
- Darby Translation (DBY)
- and I will fill his mountains with his slain. In thy hills, and in thy valleys, and in all thy water-courses shall they fall that are slain with the sword.
- Webster's Bible (WBS)
- And I will fill his mountains with his slain [men] : in thy hills, and in thy valleys, and in all thy rivers, shall they fall that are slain with the sword.
- Young's Literal Translation (YLT)
- And filled his mountains with his wounded, Thy hills, and thy valleys, and all thy streams, The pierced of the sword fall into them.
Read in context
- 6ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು.
- 7ಹೀಗೆ ನಾನು ಸೇಯಾರ್ ಪರ್ವತವನ್ನು ಸಂಪೂರ್ಣ ಹಾಳು ಮಾಡುವೆನು; ಅದರೊಳಗೆ ಹಾದು ಹೋಗು ವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.
- 8ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿ ಸುವರು. ನಿನ್ನ ಕತ್ತಿಯಿಂದ ಹತವಾದವರು ನಿನ್ನ ಹಳ್ಳ ಕೊಳ್ಳಗಳಲ್ಲಿಯೂ ಬೀಳುವರು.
- 9ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
- 10ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
Cross references
- Ezekiel 31:12 ಯೆಹೆಜ್ಕೇಲನು 31:12ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
- Ezekiel 39:4–5 ಯೆಹೆಜ್ಕೇಲನು 39:4–5ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು. ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 32:4–5 ಯೆಹೆಜ್ಕೇಲನು 32:4–5ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು. ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು.
- Isaiah 34:2–7 ಯೆಶಾಯ 34:2–7ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ. ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು--