Ezekiel · chapter 36 · verse 10
Ezekiel 36:10 in Kannada
ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
Naanu manushyarannoo ellaa israayel manetanada varannoo andare ellarannoo ninna mele vruddhi maaduttene, pattanagalu janabharitavaaguvavu, haalaada pradeshagalu kattalpaduvavu;
Ezekiel 36:10 in English
- King James Version (KJV)
- And I will multiply men upon you, all the house of Israel, [even] all of it: and the cities shall be inhabited, and the wastes shall be builded:
- World English Bible (WEB)
- I will multiply men on you, all the house of Israel, even all of it. The cities will be inhabited and the waste places will be built.
- American Standard Version (ASV)
- and I will multiply men upon you, all the house of Israel, even all of it; and the cities shall be inhabited, and the waste places shall be builded;
- Bible in Basic English (BBE)
- And I will let your numbers be increased, all the children of Israel, even all of them: and the towns will be peopled and the waste places will have buildings;
- Darby Translation (DBY)
- And I will multiply men upon you, all the house of Israel, the whole of it; and the cities shall be inhabited, and the waste places shall be builded.
- Webster's Bible (WBS)
- And I will multiply men upon you, all the house of Israel, [even] all of it: and the cities shall be inhabited, and the wastes shall be built.
- Young's Literal Translation (YLT)
- And I have multiplied on you men, All the house of Israel — all of it, And the cities have been inhabited, And the wastes are built.
Read in context
- 8ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
- 9ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.
- 10ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
- 11ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- 12ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.
Cross references
- Ezekiel 36:33 ಯೆಹೆಜ್ಕೇಲನು 36:33ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
- Jeremiah 33:12 ಯೆರೆಮೀಯ 33:12ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
- Jeremiah 30:19 ಯೆರೆಮೀಯ 30:19ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 31:27–28 ಯೆರೆಮೀಯ 31:27–28ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು. ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- Isaiah 27:6 ಯೆಶಾಯ 27:6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
- Isaiah 58:12 ಯೆಶಾಯ 58:12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Isaiah 52:9 ಯೆಶಾಯ 52:9ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
- Isaiah 41:17–23 ಯೆಶಾಯ 41:17–23ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು. ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು. ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು. ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು. ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ. ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು. ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
- Amos 9:14 ಆಮೋಸ 9:14ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Isaiah 49:17–23 ಯೆಶಾಯ 49:17–23ನಿನ್ನ ಮಕ್ಕಳು ತ್ವರೆಪಡುವರು; ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು. ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ. ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು. ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು. ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು. ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.