Ezekiel · chapter 36 · verse 17
Ezekiel 36:17 in Kannada
ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
Manushyaputrane, yaavaaga israayelyara manetanadavaru svanta deshadalli vaasisidaro, aaga avaru adannu tamma svanta maargagalindaloo dushkaaryagalindaloo ashuddha golisidaru. Avara aa dushkaaryagalu nanna munde muttaagiruvavala ashuddhatvada haagittu.
Ezekiel 36:17 in English
- King James Version (KJV)
- Son of man, when the house of Israel dwelt in their own land, they defiled it by their own way and by their doings: their way was before me as the uncleanness of a removed woman.
- World English Bible (WEB)
- “Son of man, when the house of Israel lived in their own land, they defiled it by their ways and by their deeds. Their way before me was as the uncleanness of a woman in her impurity.
- American Standard Version (ASV)
- Son of man, when the house of Israel dwelt in their own land, they defiled it by their way and by their doings: their way before me was as the uncleanness of a woman in her impurity.
- Bible in Basic English (BBE)
- Son of man, when the children of Israel were living in their land, they made it unclean by their way and their acts: their way before me was as when a woman is unclean at the time when she is kept separate.
- Darby Translation (DBY)
- Son of man, when the house of Israel dwelt in their own land, they defiled it by their way and by their doings: their way was before me as the uncleanness of a woman in her separation.
- Webster's Bible (WBS)
- Son of man, when the house of Israel dwelt in their own land, they defiled it by their own way and by their doings: their way was before me as the uncleanness of a removed woman.
- Young's Literal Translation (YLT)
- 'Son of man, The house of Israel are dwelling on their land, And they defile it by their way and by their doings, As the uncleanness of a separated one hath their way been before Me.
Read in context
- 15ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- 16ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- 17ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
- 18ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು.
- 19ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.
Cross references
- Jeremiah 2:7 ಯೆರೆಮೀಯ 2:7ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
- Numbers 35:33–34 ಅರಣ್ಯಕಾಂಡ 35:33–34ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Micah 2:10 ಮೀಕ 2:10ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
- Isaiah 24:5 ಯೆಶಾಯ 24:5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
- Jeremiah 16:18 ಯೆರೆಮೀಯ 16:18ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
- Leviticus 15:19–33 ಯಾಜಕಕಾಂಡ 15:19–33ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು. ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು. ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು. ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅವಳು ತನ್ನ ಸ್ರಾವದಿಂದ ಶುದ್ಧಳಾದ ದಿನದಿಂದ ಏಳು ದಿನ ಲೆಕ್ಕಿಸಬೇಕು ತರು ವಾಯ ಅವಳು ಶುದ್ಧಳಾಗಿರುವಳು. ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು. ಯಾಜಕನು ಒಂದನ್ನು ಪಾಪಬಲಿಗಾ ಗಿಯೂ ಇನ್ನೊಂದನ್ನು ದಹನಬಲಿಗಾಗಿಯೂ ಸಮ ರ್ಪಿಸಬೇಕು; ಯಾಜಕನು ಅವಳಿಗಾಗಿ ಅವಳ ಅಶುದ್ಧ ತೆಯ ಸ್ರಾವದ ವಿಷಯದಲ್ಲಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು. ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ. ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ. ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- Leviticus 18:24–28 ಯಾಜಕಕಾಂಡ 18:24–28ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ. ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು. ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;) ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
- Jeremiah 3:1–2 ಯೆರೆಮೀಯ 3:1–2ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- Isaiah 64:6 ಯೆಶಾಯ 64:6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- Jeremiah 3:9 ಯೆರೆಮೀಯ 3:9ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
- Psalm 106:37–38 ಕೀರ್ತನೆಗಳು 106:37–38ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
Original words (Hebrew)
- Son · H1121בֵּן bên
- man · H120אָדָם ʼâdâm
- house · H1004בַּיִת bayith
- Israel · H3478יִשְׂרָאֵל Yisrâʼêl
- dwelt · H3427יָשַׁב yâshab
- land · H127אֲדָמָה ʼădâmâh
- defiled · H2930טָמֵא ṭâmêʼ
- way · H1870דֶּרֶךְ derek
- doings · H5949עֲלִילָה ʻălîylâh
- way · H1870דֶּרֶךְ derek
- before · H6440פָּנִים pânîym
- uncleanness · H2932טֻמְאָה ṭumʼâh
- woman · H5079נִדָּה niddâh