Ezekiel · chapter 36 · verse 19
Ezekiel 36:19 in Kannada
ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.
Naanu avarannu anyajanaangagalalli chadarisidenu. Avaru aa desha galalli chadarihodaru; avara maargagala dushkri yegala prakaaravaagi avarige naanu nyaaya teerisidenu.
Ezekiel 36:19 in English
- King James Version (KJV)
- And I scattered them among the heathen, and they were dispersed through the countries: according to their way and according to their doings I judged them.
- World English Bible (WEB)
- I scattered them among the nations, and they were dispersed through the countries. I judged them according to their way and according to their deeds.
- American Standard Version (ASV)
- and I scattered them among the nations, and they were dispersed through the countries: according to their way and according to their doings I judged them.
- Bible in Basic English (BBE)
- And I sent them in flight among the nations and wandering through the countries: I was their judge, rewarding them for their way and their acts.
- Darby Translation (DBY)
- And I scattered them among the nations, and they were dispersed through the countries: according to their way and according to their doings I judged them.
- Webster's Bible (WBS)
- And I scattered them among the heathen, and they were dispersed through the countries: according to their way and according to their doings I judged them.
- Young's Literal Translation (YLT)
- And I scatter them among nations, And they are spread through lands, According to their way, and according to their doings, I have judged them.
Read in context
- 17ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
- 18ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು.
- 19ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.
- 20ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
- 21ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.
Cross references
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Ezekiel 39:24 ಯೆಹೆಜ್ಕೇಲನು 39:24ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.
- Romans 2:6 ರೋಮಾಪುರದವರಿಗೆ 2:6ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
- Ezekiel 22:15 ಯೆಹೆಜ್ಕೇಲನು 22:15ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
- Ezekiel 5:12 ಯೆಹೆಜ್ಕೇಲನು 5:12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
- Amos 9:9 ಆಮೋಸ 9:9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
- Ezekiel 18:30 ಯೆಹೆಜ್ಕೇಲನು 18:30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
- Ezekiel 7:8 ಯೆಹೆಜ್ಕೇಲನು 7:8ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
- Revelation 20:12–15 ಪ್ರಕಟನೆ 20:12–15ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Ezekiel 22:31 ಯೆಹೆಜ್ಕೇಲನು 22:31ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Leviticus 26:38 ಯಾಜಕಕಾಂಡ 26:38ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.
- Ezekiel 7:3 ಯೆಹೆಜ್ಕೇಲನು 7:3ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.