Ezekiel · chapter 36 · verse 20
Ezekiel 36:20 in Kannada
ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
Avaru aa anyajanaangagalolage serikonda mele--ivare kartana janaru mattu ivaru aatana deshadinda horatuhodaru endu avarige heli nanna parishuddha hesarannu apavitramaaduvaru.
Ezekiel 36:20 in English
- King James Version (KJV)
- And when they entered unto the heathen, whither they went, they profaned my holy name, when they said to them, These [are] the people of the LORD, and are gone forth out of his land.
- World English Bible (WEB)
- When they came to the nations where they went, they profaned my holy name, in that men said of them, ‘These are the LORD’s people, and have left his land.’
- American Standard Version (ASV)
- And when they came unto the nations, whither they went, they profaned my holy name; in that men said of them, These are the people of Jehovah, and are gone forth out of his land.
- Bible in Basic English (BBE)
- And when they came among the nations, wherever they went, they made my holy name unclean, when it was said of them, These are the people of the Lord who have gone out from his land.
- Darby Translation (DBY)
- And when they came to the nations whither they went, they profaned my holy name, when it was said of them, These are the people of Jehovah, and they are gone forth out of his land.
- Webster's Bible (WBS)
- And when they entered among the heathen, whither they went, they profaned my holy name, when they said to them, These [are] the people of the LORD, and are gone forth out of his land.
- Young's Literal Translation (YLT)
- And one goeth in unto the nations whither they have gone, And they pollute My holy name by saying to them, The people of Jehovah [are] these, And from His land they have gone forth.
Read in context
- 18ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು.
- 19ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.
- 20ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
- 21ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು.
- 22ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
Cross references
- Romans 2:24 ರೋಮಾಪುರದವರಿಗೆ 2:24ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
- Isaiah 52:5 ಯೆಶಾಯ 52:5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
- Jeremiah 33:24 ಯೆರೆಮೀಯ 33:24ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- Exodus 32:11–13 ವಿಮೋಚನಕಾಂಡ 32:11–13ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು? ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು. ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
- 2 Kings 18:30 2 ಅರಸುಗಳು 18:30ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
- Joshua 7:9 ಯೆಹೋಶುವ 7:9ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
- Ezekiel 12:16 ಯೆಹೆಜ್ಕೇಲನು 12:16ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Numbers 14:15–16 ಅರಣ್ಯಕಾಂಡ 14:15–16ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು-- ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
- 2 Kings 18:35 2 ಅರಸುಗಳು 18:35ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
- 2 Kings 19:10–12 2 ಅರಸುಗಳು 19:10–12ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ. ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ? ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,