Ezekiel · chapter 36 · verse 25
Ezekiel 36:25 in Kannada
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
Aamele naanu nimma mele shuddhavaada neerannu chimukisuttene mattu neevu shuddharaaguviri; ashuddhatvagalindaloo nimma ellaa vigrahagalindaloo nimmannu shuddheekarisuvenu.
Ezekiel 36:25 in English
- King James Version (KJV)
- Then will I sprinkle clean water upon you, and ye shall be clean: from all your filthiness, and from all your idols, will I cleanse you.
- World English Bible (WEB)
- I will sprinkle clean water on you, and you will be clean. I will cleanse you from all your filthiness and from all your idols.
- American Standard Version (ASV)
- And I will sprinkle clean water upon you, and ye shall be clean: from all your filthiness, and from all your idols, will I cleanse you.
- Bible in Basic English (BBE)
- And I will put clean water on you so that you may be clean: from all your unclean ways and from all your images I will make you clean.
- Darby Translation (DBY)
- And I will sprinkle clean water upon you, and ye shall be clean: from all your uncleannesses and from all your idols will I cleanse you.
- Webster's Bible (WBS)
- Then will I sprinkle clean water upon you, and ye shall be clean: from all your filthiness, and from all your idols, will I cleanse you.
- Young's Literal Translation (YLT)
- And I have sprinkled over you clean water, And ye have been clean; From all your uncleannesses, and from all your idols, I do cleanse you.
Read in context
- 23ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 24ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
- 25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- 26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
- 27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
Cross references
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- John 3:5 ಯೋಹಾನನು 3:5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
- Jeremiah 33:8 ಯೆರೆಮೀಯ 33:8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Titus 3:5–6 ತೀತನಿಗೆ 3:5–6ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- Ephesians 5:26–27 ಎಫೆಸದವರಿಗೆ 5:26–27ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Isaiah 4:4 ಯೆಶಾಯ 4:4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
- Zechariah 13:1–2 ಜೆಕರ್ಯ 13:1–2ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು. ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- Psalm 51:7 ಕೀರ್ತನೆಗಳು 51:7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Psalm 51:2 ಕೀರ್ತನೆಗಳು 51:2ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
- Ezekiel 37:23 ಯೆಹೆಜ್ಕೇಲನು 37:23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.