Ezekiel · chapter 36 · verse 27
Ezekiel 36:27 in Kannada
ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
Nanna aatma vannu nimmolage iduvenu; neevu nanna niyama galalli nadeyuva haage maaduvenu mattu neevu nanna nyaayavidhigalannu anusarisi nadeyuviri.
Ezekiel 36:27 in English
- King James Version (KJV)
- And I will put my spirit within you, and cause you to walk in my statutes, and ye shall keep my judgments, and do [them].
- World English Bible (WEB)
- I will put my Spirit within you, and cause you to walk in my statutes. You will keep my ordinances and do them.
- American Standard Version (ASV)
- And I will put my Spirit within you, and cause you to walk in my statutes, and ye shall keep mine ordinances, and do them.
- Bible in Basic English (BBE)
- And I will put my spirit in you, causing you to be guided by my rules, and you will keep my orders and do them.
- Darby Translation (DBY)
- And I will put my Spirit within you, and cause you to walk in my statutes and keep mine ordinances, and ye shall do them.
- Webster's Bible (WBS)
- And I will put my spirit within you, and cause you to walk in my statutes, and ye shall keep my judgments, and do [them] .
- Young's Literal Translation (YLT)
- And My Spirit I give in your midst, And I have done this, so that in My statutes ye walk, And My judgments ye keep, and have done them.
Read in context
- 25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- 26ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
- 27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- 28ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
- 29ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
Cross references
- Titus 3:3–6 ತೀತನಿಗೆ 3:3–6ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- Hebrews 13:21 ಇಬ್ರಿಯರಿಗೆ 13:21ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Ezekiel 39:29 ಯೆಹೆಜ್ಕೇಲನು 39:29ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 1 Corinthians 3:16 1 ಕೊರಿಂಥದವರಿಗೆ 3:16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- Proverbs 1:23 ಜ್ಞಾನೋಕ್ತಿಗಳು 1:23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Titus 2:11–14 ತೀತನಿಗೆ 2:11–14ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Isaiah 44:3–4 ಯೆಶಾಯ 44:3–4ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು. ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- Ezekiel 37:14 ಯೆಹೆಜ್ಕೇಲನು 37:14ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
- 1 John 3:24 1 ಯೋಹಾನನು 3:24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Ezekiel 37:24 ಯೆಹೆಜ್ಕೇಲನು 37:24ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.