Ezekiel · chapter 36 · verse 29
Ezekiel 36:29 in Kannada
ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
Allade naanu nimmannu nimma ashuddhatvagalindaloo saha rakshisuvenu; bele bele yalendu heli adannu hechchisuvenu, kshaamavannu nimma mele baramaaduvadilla.
Ezekiel 36:29 in English
- King James Version (KJV)
- I will also save you from all your uncleannesses: and I will call for the corn, and will increase it, and lay no famine upon you.
- World English Bible (WEB)
- I will save you from all your uncleanness. I will call for the grain and will multiply it, and lay no famine on you.
- American Standard Version (ASV)
- And I will save you from all your uncleannesses: and I will call for the grain, and will multiply it, and lay no famine upon you.
- Bible in Basic English (BBE)
- And I will make you free from all your unclean ways: and at my voice the grain will come up and be increased, and I will not let you be short of food.
- Darby Translation (DBY)
- And I will save you from all your uncleannesses; and I will call for the corn and will multiply it, and lay no famine upon you.
- Webster's Bible (WBS)
- I will also save you from all your uncleannesses: and I will call for the corn, and will increase it, and lay no famine upon you.
- Young's Literal Translation (YLT)
- And I have saved you from all your uncleannesses, And I have called unto the corn, and multiplied it, And I have put no famine upon you.
Read in context
- 27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- 28ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.
- 29ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
- 30ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
- 31ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
Cross references
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- John 1:7–9 ಯೋಹಾನನು 1:7–9ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು. ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು. ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- Hosea 2:21–23 ಹೋಶೇಯ 2:21–23ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು. ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Hosea 14:4 ಹೋಶೇಯ 14:4ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
- Romans 11:26 ರೋಮಾಪುರದವರಿಗೆ 11:26ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Psalm 105:6 ಕೀರ್ತನೆಗಳು 105:6ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
- Jeremiah 33:8 ಯೆರೆಮೀಯ 33:8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
- Ezekiel 34:27–29 ಯೆಹೆಜ್ಕೇಲನು 34:27–29ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು; ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು. ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
- Ezekiel 36:8–9 ಯೆಹೆಜ್ಕೇಲನು 36:8–9ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ. ಇಗೋ, ನಾನು ನಿಮ್ಮ ಪಕ್ಷದಲ್ಲಿ ಇದ್ದೇವೆ, ನಾನು ನಿಮ್ಮ ಕಡೆಗೆ ತಿರುಗಿ ಕೊಳ್ಳುತ್ತೇನೆ. ನೀವು ಉತ್ತುಬಿತ್ತುವಿರಿ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.