Ezekiel · chapter 36 · verse 3
Ezekiel 36:3 in Kannada
ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
Aadada rinda pravaadisu mattu helu, devaraada kartanu heege heluttaane--avaru ninnannu haalumaadi; ellaa kadegalindaloo nungibittaru. Adu neevu anyajanaangagala uliyuvikege svaastyavaaga bekendu neevu maatanaaduvavara tutigalalliyoo janara nindeyalliyoo melettalpattiddeeri;
Ezekiel 36:3 in English
- King James Version (KJV)
- Therefore prophesy and say, Thus saith the Lord GOD; Because they have made [you] desolate, and swallowed you up on every side, that ye might be a possession unto the residue of the heathen, and ye are taken up in the lips of talkers, and [are] an infamy of the people:
- World English Bible (WEB)
- therefore prophesy, and say, ‘The Lord GOD says: “Because, even because they have made you desolate, and swallowed you up on every side, that you might be a possession to the residue of the nations, and you are taken up in the lips of talkers, and the evil report of the people;”
- American Standard Version (ASV)
- therefore prophesy, and say, Thus saith the Lord Jehovah: Because, even because they have made you desolate, and swallowed you up on every side, that ye might be a possession unto the residue of the nations, and ye are taken up in the lips of talkers, and the evil report of the people;
- Bible in Basic English (BBE)
- For this cause be a prophet, and say, This is what the Lord has said: Because, even because they have been glad over you and put you to shame on every side, because you have become a heritage for the rest of the nations, and you are taken up on the lips of talkers and in the evil talk of the people:
- Darby Translation (DBY)
- therefore prophesy and say, Thus saith the Lord Jehovah: Because, yea, because they have made [you] desolate, and have swallowed you up on every side, that ye might be a possession unto the remnant of the nations, and ye are taken up in the lips of talkers, and in the defaming of the people:
- Webster's Bible (WBS)
- Therefore prophesy and say, Thus saith the Lord GOD; Because they have made [you] desolate, and swallowed you up on every side, that ye might be a possession to the residue of the heathen, and ye are taken up in the lips of talkers, and [are] an infamy of the people:
- Young's Literal Translation (YLT)
- therefore, prophesy, and thou hast said: Thus said the Lord Jehovah: Because, even because, of desolating, And of swallowing you up from round about, For your being a possession to the remnant of the nations, And ye are taken up on the tip of the tongue, And [are] an evil report of the people.
Read in context
- 1ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
- 2ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
- 3ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
- 4ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
- 5ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
Cross references
- Psalm 44:13–14 ಕೀರ್ತನೆಗಳು 44:13–14ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Lamentations 2:15–16 ಪ್ರಲಾಪಗಳು 2:15–16ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ? ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
- Daniel 9:16 ದಾನಿಯೇಲನು 9:16ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ.
- Jeremiah 41:1–18 ಯೆರೆಮೀಯ 41:1–18ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು. ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು. ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು. ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ ಶೆಕೆಮ್ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು. ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು. ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು. ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ. ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು. ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು. ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು. ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು. ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು. ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು. ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು, ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು. ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
- Deuteronomy 28:37 ಧರ್ಮೋಪದೇಶಕಾಂಡ 28:37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- Lamentations 2:2 ಪ್ರಲಾಪಗಳು 2:2ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
- Proverbs 1:12 ಜ್ಞಾನೋಕ್ತಿಗಳು 1:12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- Psalm 69:12 ಕೀರ್ತನೆಗಳು 69:12ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
- Jeremiah 33:24 ಯೆರೆಮೀಯ 33:24ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- 1 Kings 9:7–8 1 ಅರಸುಗಳು 9:7–8ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು. ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
Original words (Hebrew)
- prophesy · H5012נָבָא nâbâʼ
- say · H559אָמַר ʼâmar
- saith · H559אָמַר ʼâmar
- Lord · H136אֲדֹנָי ʼĂdônây
- desolate · H8074שָׁמֵם shâmêm
- up · H7602שָׁאַף shâʼaph
- side · H5439סָבִיב çâbîyb
- possession · H4181מוֹרָשָׁה môwrâshâh
- residue · H7611שְׁאֵרִית shᵉʼêrîyth
- heathen · H1471גּוֹי gôwy
- up · H5927עָלָה ʻâlâh
- lips · H8193שָׂפָה sâphâh
- talkers · H3956לָשׁוֹן lâshôwn
- infamy · H1681דִּבָּה dibbâh
- people · H5971עַם ʻam