Ezekiel · chapter 37 · verse 14
Ezekiel 37:14 in Kannada
ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
Nanna aatma vannu nimmolage ittaaga neevu badukuviri mattu naanu nimmannu nimma svanta deshadallirisuvenu; aamele naane kartanu maatanaadi nadesiddenem du neevu tiliyuviri endu kartanu heluttaane.
Ezekiel 37:14 in English
- King James Version (KJV)
- And shall put my spirit in you, and ye shall live, and I shall place you in your own land: then shall ye know that I the LORD have spoken [it], and performed [it], saith the LORD.
- World English Bible (WEB)
- I will put my Spirit in you, and you will live. Then I will place you in your own land; and you will know that I, the LORD, have spoken it and performed it,” says the LORD.’”
- American Standard Version (ASV)
- And I will put my Spirit in you, and ye shall live, and I will place you in your own land: and ye shall know that I, Jehovah, have spoken it and performed it, saith Jehovah.
- Bible in Basic English (BBE)
- And I will put my spirit in you, so that you may come to life, and I will give you a rest in your land: and you will be certain that I the Lord have said it and have done it, says the Lord.
- Darby Translation (DBY)
- And I will put my Spirit in you, and ye shall live, and I will place you in your own land: and ye shall know that I Jehovah have spoken, and have done [it], saith Jehovah.
- Webster's Bible (WBS)
- And shall put my spirit in you, and ye shall live, and I shall place you in your own land: then shall ye know that I the LORD have spoken [it] , and performed [it] , saith the LORD.
- Young's Literal Translation (YLT)
- And I have given My Spirit in you, and ye have lived, And I have caused you to rest on your land, And ye have known that I Jehovah, I have spoken, and I have done [it], An affirmation of Jehovah.'
Read in context
- 12ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
- 13ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- 14ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
- 15ಕರ್ತನ ವಾಕ್ಯವು ನನಗೆ ತಿರುಗಿ ಬಂದು ಹೇಳಿದ್ದೇ ನಂದರೆ--
- 16ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
Cross references
- Ezekiel 36:27 ಯೆಹೆಜ್ಕೇಲನು 36:27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Joel 2:28–29 ಯೋವೇಲ 2:28–29ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು. ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.
- Ezekiel 11:19 ಯೆಹೆಜ್ಕೇಲನು 11:19ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
- Ezekiel 36:36 ಯೆಹೆಜ್ಕೇಲನು 36:36ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
- Ezekiel 39:29 ಯೆಹೆಜ್ಕೇಲನು 39:29ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 1 Corinthians 15:45 1 ಕೊರಿಂಥದವರಿಗೆ 15:45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
- Ezekiel 17:24 ಯೆಹೆಜ್ಕೇಲನು 17:24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Titus 3:5–6 ತೀತನಿಗೆ 3:5–6ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- Ezekiel 37:9 ಯೆಹೆಜ್ಕೇಲನು 37:9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
- Romans 8:11 ರೋಮಾಪುರದವರಿಗೆ 8:11ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
- Romans 8:2 ರೋಮಾಪುರದವರಿಗೆ 8:2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
- Ezekiel 22:14 ಯೆಹೆಜ್ಕೇಲನು 22:14ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.