Ezekiel · chapter 37 · verse 23
Ezekiel 37:23 in Kannada
ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
Illave avaru innu tamma vigrahagalindaloo asahyagalindaloo ellaa akramagalindaloo ashuddhavaaguvadilla; aadare naanu avarannu paapamaadidavara ellaa nivaasi galinda rakshisi, avarannu shuddhamaaduvenu; heege avaru nanna janaraagiruvaru naanu avarige devaraagiruvenu.
Ezekiel 37:23 in English
- King James Version (KJV)
- Neither shall they defile themselves any more with their idols, nor with their detestable things, nor with any of their transgressions: but I will save them out of all their dwellingplaces, wherein they have sinned, and will cleanse them: so shall they be my people, and I will be their God.
- World English Bible (WEB)
- They won’t defile themselves any more with their idols, nor with their detestable things, nor with any of their transgressions; but I will save them out of all their dwelling places in which they have sinned, and will cleanse them. So they will be my people, and I will be their God.
- American Standard Version (ASV)
- neither shall they defile themselves any more with their idols, nor with their detestable things, nor with any of their transgressions; but I will save them out of all their dwelling-places, wherein they have sinned, and will cleanse them: so shall they be my people, and I will be their God.
- Bible in Basic English (BBE)
- And they will no longer make themselves unclean with their images or with their hated things or with any of their sins: but I will give them salvation from all their turning away in which they have done evil, and will make them clean; and they will be to me a people, and I will be to them a God.
- Darby Translation (DBY)
- And they shall not defile themselves any more with their idols, or with their detestable things, or with any of their transgressions; and I will save them out of all their dwelling-places wherein they have sinned, and will cleanse them; and they shall be my people, and I will be their God.
- Webster's Bible (WBS)
- Neither shall they defile themselves any more with their idols, nor with their detestable things, nor with any of their transgressions: but I will save them out of all their dwelling-places, in which they have sinned, and will cleanse them: so shall they be my people, and I will be their God.
- Young's Literal Translation (YLT)
- Nor are they defiled any more with their idols, And with their abominations, And with any of their transgressions, And I have saved them out of all their dwellings, In which they have sinned, And I have cleansed them, And they have been to Me for a people, And I — I am to them for God.
Read in context
- 21ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
- 22ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.
- 23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
- 24ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
- 25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
Cross references
- Revelation 21:3–4 ಪ್ರಕಟನೆ 21:3–4ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Ezekiel 36:28–29 ಯೆಹೆಜ್ಕೇಲನು 36:28–29ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
- Ephesians 5:26–27 ಎಫೆಸದವರಿಗೆ 5:26–27ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Zechariah 13:1–2 ಜೆಕರ್ಯ 13:1–2ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು. ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Hosea 14:8 ಹೋಶೇಯ 14:8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Ezekiel 20:43 ಯೆಹೆಜ್ಕೇಲನು 20:43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
- Genesis 17:7–8 ಆದಿಕಾಂಡ 17:7–8ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Ezekiel 43:7–8 ಯೆಹೆಜ್ಕೇಲನು 43:7–8ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ. ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ; ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿ ಬಿಟ್ಟಿದ್ದೇನೆ.
- Psalm 68:35 ಕೀರ್ತನೆಗಳು 68:35ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.