Ezekiel · chapter 37 · verse 24
Ezekiel 37:24 in Kannada
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
Nanna sevakanaada daaveedanu avara mele arasanaagiruvanu; avarellarigoo obbane kurubaniruvanu nanna nyaayaniyama galanne anusarisuvante maaduvenu.
Ezekiel 37:24 in English
- King James Version (KJV)
- And David my servant [shall be] king over them; and they all shall have one shepherd: they shall also walk in my judgments, and observe my statutes, and do them.
- World English Bible (WEB)
- “‘“My servant David will be king over them. They all will have one shepherd. They will also walk in my ordinances and observe my statutes, and do them.
- American Standard Version (ASV)
- And my servant David shall be king over them; and they all shall have one shepherd: they shall also walk in mine ordinances, and observe my statutes, and do them.
- Bible in Basic English (BBE)
- And my servant David will be king over them; and they will all have one keeper: and they will be guided by my orders and will keep my rules and do them.
- Darby Translation (DBY)
- And David my servant shall be king over them; and they all shall have one shepherd: and they shall walk in mine ordinances, and keep my statutes, and do them.
- Webster's Bible (WBS)
- And David my servant [shall be] king over them; and they all shall have one shepherd: they shall also walk in my judgments, and observe my statutes, and do them.
- Young's Literal Translation (YLT)
- And My servant David [is] king over them, And one shepherd have they all, And in My judgments they go, And My statutes they keep, and have done them.
Read in context
- 22ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ.
- 23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
- 24ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
- 25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- 26ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
Cross references
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Ezekiel 37:25 ಯೆಹೆಜ್ಕೇಲನು 37:25ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
- Jeremiah 30:9 ಯೆರೆಮೀಯ 30:9ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
- Jeremiah 23:5 ಯೆರೆಮೀಯ 23:5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- Ezekiel 36:27 ಯೆಹೆಜ್ಕೇಲನು 36:27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Titus 2:11–13 ತೀತನಿಗೆ 2:11–13ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- Luke 1:32 ಲೂಕನು 1:32ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.