Ezekiel · chapter 38 · verse 15
Ezekiel 38:15 in Kannada
ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
Neenu uttara bhaagagala ninna sthaladinda baruvi; neenoo ninna sangada aneka janaroo kuduregalannu hattida varaagi balavaada sainyavaagiyoo mahaadandaa giyoo baruviri.
Ezekiel 38:15 in English
- King James Version (KJV)
- And thou shalt come from thy place out of the north parts, thou, and many people with thee, all of them riding upon horses, a great company, and a mighty army:
- World English Bible (WEB)
- You will come from your place out of the uttermost parts of the north, you, and many peoples with you, all of them riding on horses, a great company and a mighty army.
- American Standard Version (ASV)
- And thou shalt come from thy place out of the uttermost parts of the north, thou, and many peoples with thee, all of them riding upon horses, a great company and a mighty army;
- Bible in Basic English (BBE)
- And you will come from your place in the inmost parts of the north, you and a great number of peoples with you, all of them on horseback, a great force and a strong army:
- Darby Translation (DBY)
- And thou shalt come from thy place out of the uttermost north, thou and many peoples with thee, all of them riding upon horses, a great assemblage and a mighty army.
- Webster's Bible (WBS)
- And thou shalt come from thy place out of the north parts, thou, and many people with thee, all of them riding upon horses, a great company, and a mighty army:
- Young's Literal Translation (YLT)
- And thou hast come in out of thy place, From the sides of the north, Thou and many peoples with thee, Riding on horses — all of them, A great assembly, and a numerous force.
Read in context
- 13ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು.
- 14ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ
- 15ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
- 16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- 17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?
Cross references
- Ezekiel 39:2 ಯೆಹೆಜ್ಕೇಲನು 39:2ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
- Ezekiel 38:6 ಯೆಹೆಜ್ಕೇಲನು 38:6ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
- Revelation 20:8 ಪ್ರಕಟನೆ 20:8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
- Revelation 16:14 ಪ್ರಕಟನೆ 16:14ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
- Revelation 16:16 ಪ್ರಕಟನೆ 16:16ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
- Zechariah 12:2–4 ಜೆಕರ್ಯ 12:2–4ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು. ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
- Joel 3:2 ಯೋವೇಲ 3:2ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
- Daniel 11:40 ದಾನಿಯೇಲನು 11:40ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Ezekiel 38:4 ಯೆಹೆಜ್ಕೇಲನು 38:4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
- Zechariah 14:2–3 ಜೆಕರ್ಯ 14:2–3ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.