Ezekiel · chapter 38 · verse 17
Ezekiel 38:17 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?
Devaraada kartanu heege heluttaane--naanu yaavana vishayavaagi nanna sevakaraada israayelina pravaadigalinda poorvakaaladalli maatanaadideno avanu neene allave? Ninnannu avarige virodhavaagi bara maaduttenendu aa dinagalalli aneka varshaga lige munche pravaadisidarallave?
Ezekiel 38:17 in English
- King James Version (KJV)
- Thus saith the Lord GOD; [Art] thou he of whom I have spoken in old time by my servants the prophets of Israel, which prophesied in those days [many] years that I would bring thee against them?
- World English Bible (WEB)
- “‘The Lord GOD says: “Are you he of whom I spoke in old time by my servants the prophets of Israel, who prophesied in those days for years that I would bring you against them?
- American Standard Version (ASV)
- Thus saith the Lord Jehovah: Art thou he of whom I spake in old time by my servants the prophets of Israel, that prophesied in those days for [many] years that I would bring thee against them?
- Bible in Basic English (BBE)
- This is what the Lord has said: You are he of whom I gave them word in earlier times by my servants, the prophets of Israel, who in those days went on saying, year after year, that I would make you come up against them.
- Darby Translation (DBY)
- Thus saith the Lord Jehovah: Art thou not he of whom I have spoken in old time through my servants the prophets of Israel, who prophesied in those days, for [many] years, that I would bring thee against them?
- Webster's Bible (WBS)
- Thus saith the Lord GOD; [Art] thou he of whom I have spoken in old time by my servants the prophets of Israel, who prophesied in those days [many] years, that I would bring thee against them?
- Young's Literal Translation (YLT)
- Thus said the Lord Jehovah: Art thou he of whom I spake in former days, By the hand of My servants, prophets of Israel, Who are prophesying in those days — years, To bring thee in against them?
Read in context
- 15ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ.
- 16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- 17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?
- 18ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
- 19ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
Cross references
- Daniel 11:40–45 ದಾನಿಯೇಲನು 11:40–45ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು. ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು. ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು. ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು. ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು. ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
- Joel 3:9–14 ಯೋವೇಲ 3:9–14ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ. ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
- Ezekiel 38:16 ಯೆಹೆಜ್ಕೇಲನು 38:16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- Isaiah 63:1–6 ಯೆಶಾಯ 63:1–6ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು. ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು. ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು. ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
- Isaiah 34:1–6 ಯೆಶಾಯ 34:1–6ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ. ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ. ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
- Ezekiel 38:10–11 ಯೆಹೆಜ್ಕೇಲನು 38:10–11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ, ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
- Zechariah 12:2–8 ಜೆಕರ್ಯ 12:2–8ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು. ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು. ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು. ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು. ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು. ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
- Isaiah 66:15–16 ಯೆಶಾಯ 66:15–16ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು. ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Zechariah 14:1–21 ಜೆಕರ್ಯ 14:1–21ಇಗೋ, ಕರ್ತನ ದಿನವು ಬರುತ್ತದೆ. ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು. ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು. ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು. ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು. ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು. ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು. ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ. ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು. ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು. ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು. ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು. ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು. ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು. ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು. ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ. ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- Psalm 110:5–6 ಕೀರ್ತನೆಗಳು 110:5–6ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು. ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- spoken · H1696דָבַר dâbar
- old · H6931קַדְמוֹנִי qadmôwnîy
- time · H3117יוֹם yôwm
- by · H3027יָד yâd
- servants · H5650עֶבֶד ʻebed
- prophets · H5030נָבִיא nâbîyʼ
- Israel · H3478יִשְׂרָאֵל Yisrâʼêl
- prophesied · H5012נָבָא nâbâʼ
- days · H3117יוֹם yôwm
- years · H8141שָׁנֶה shâneh
- bring · H935בּוֹא bôwʼ