Ezekiel · chapter 38 · verse 19
Ezekiel 38:19 in Kannada
ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
Nanna ee roshadalli mattu nanna kopada benkiyalli naanu maatanaaduttene. Nishchayavaagi aa dina israayel deshadalli mahaakampana untaagu vadu;
Ezekiel 38:19 in English
- King James Version (KJV)
- For in my jealousy [and] in the fire of my wrath have I spoken, Surely in that day there shall be a great shaking in the land of Israel;
- World English Bible (WEB)
- For in my jealousy and in the fire of my wrath I have spoken. Surely in that day there will be a great shaking in the land of Israel,
- American Standard Version (ASV)
- For in my jealousy and in the fire of my wrath have I spoken, Surely in that day there shall be a great shaking in the land of Israel;
- Bible in Basic English (BBE)
- For in the fire of my wrath I have said, Truly, in that day there will be a great shaking in the land of Israel;
- Darby Translation (DBY)
- for in my jealousy, in the fire of my wrath have I spoken, Verily in that day there shall be a great shaking in the land of Israel;
- Webster's Bible (WBS)
- For in my jealousy [and] in the fire of my wrath have I spoken, Surely in that day there shall be a great shaking in the land of Israel.
- Young's Literal Translation (YLT)
- And in My zeal, in the fire of My wrath, I have spoken: Is there not in that day a great rushing on the land of Israel?
Read in context
- 17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?
- 18ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
- 19ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು;
- 20ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.
- 21ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
Cross references
- Haggai 2:6–7 ಹಗ್ಗಾಯ 2:6–7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ. ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Hebrews 12:26 ಇಬ್ರಿಯರಿಗೆ 12:26ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
- Haggai 2:21–22 ಹಗ್ಗಾಯ 2:21–22ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು. ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Revelation 16:20 ಪ್ರಕಟನೆ 16:20ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- Revelation 16:18 ಪ್ರಕಟನೆ 16:18ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
- Revelation 11:13 ಪ್ರಕಟನೆ 11:13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- Joel 3:16 ಯೋವೇಲ 3:16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
- Ezekiel 5:13 ಯೆಹೆಜ್ಕೇಲನು 5:13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- Joel 2:18 ಯೋವೇಲ 2:18ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
- Zechariah 1:14 ಜೆಕರ್ಯ 1:14ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
- Ezekiel 39:25 ಯೆಹೆಜ್ಕೇಲನು 39:25ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
- Psalm 18:7 ಕೀರ್ತನೆಗಳು 18:7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;