Ezekiel · chapter 38 · verse 7
Ezekiel 38:7 in Kannada
ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
Neenu siddhanaagi ninna sangada koodi bandiruva ninna ellaa kootagalannu siddhamaadikondu neenu avarige kaavaliru.
Ezekiel 38:7 in English
- King James Version (KJV)
- Be thou prepared, and prepare for thyself, thou, and all thy company that are assembled unto thee, and be thou a guard unto them.
- World English Bible (WEB)
- “‘“Be prepared, yes, prepare yourself, you, and all your companies who are assembled to you, and be a guard to them.
- American Standard Version (ASV)
- Be thou prepared, yea, prepare thyself, thou, and all thy companies that are assembled unto thee, and be thou a guard unto them.
- Bible in Basic English (BBE)
- Be ready, make yourself ready, you and all the forces who are with you, and be ready for my orders.
- Darby Translation (DBY)
- Be thou prepared, and prepare for thyself thou, and all thine assemblage that are assembled unto thee, and be thou a guard unto them.
- Webster's Bible (WBS)
- Be thou prepared, and prepare for thyself, thou, and all thy company that are assembled to thee, and be thou a guard to them.
- Young's Literal Translation (YLT)
- Be prepared, yea, prepare for thee, Thou and all thine assemblies who are assembled unto thee, And thou hast been to them for a guard.
Read in context
- 5ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.
- 6ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
- 7ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
- 8ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
- 9ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.
Cross references
- 2 Chronicles 25:8 2 ಪೂರ್ವಕಾಲವೃತ್ತಾಂತ 25:8ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
- Joel 3:9–12 ಯೋವೇಲ 3:9–12ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
- Jeremiah 46:14–16 ಯೆರೆಮೀಯ 46:14–16ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ. ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ. ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
- Isaiah 37:22 ಯೆಶಾಯ 37:22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- Jeremiah 51:12 ಯೆರೆಮೀಯ 51:12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
- Amos 4:12 ಆಮೋಸ 4:12ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
- Zechariah 14:2–3 ಜೆಕರ್ಯ 14:2–3ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Jeremiah 46:3–5 ಯೆರೆಮೀಯ 46:3–5ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ; ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ; ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
- Psalm 2:1–4 ಕೀರ್ತನೆಗಳು 2:1–4ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.