Ezekiel · chapter 39 · verse 21
Ezekiel 39:21 in Kannada
ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.
Naanu nanna mahimeyannu anyajanaangagalalli sthaapisuttene; ellaa anyajanaangagalu naanu nadesida nanna nyaayateerpannu mattu avara mele irisida nanna kaiyannu noduvavu.
Ezekiel 39:21 in English
- King James Version (KJV)
- And I will set my glory among the heathen, and all the heathen shall see my judgment that I have executed, and my hand that I have laid upon them.
- World English Bible (WEB)
- “I will set my glory among the nations. Then all the nations will see my judgment that I have executed, and my hand that I have laid on them.
- American Standard Version (ASV)
- And I will set my glory among the nations; and all the nations shall see my judgment that I have executed, and my hand that I have laid upon them.
- Bible in Basic English (BBE)
- And I will put my glory among the nations, and all the nations will see my punishments which I have put into effect, and my hand which I have put on them.
- Darby Translation (DBY)
- And I will set my glory among the nations, and all the nations shall see my judgment which I have executed, and my hand which I have laid upon them.
- Webster's Bible (WBS)
- And I will set my glory among the heathen, and all the heathen shall see my judgment that I have executed, and my hand that I have laid upon them.
- Young's Literal Translation (YLT)
- And I have given My honour among nations, And seen have all the nations My Judgment that I have done, And My hand that I have laid on them.
Read in context
- 19ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು.
- 20ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- 21ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.
- 22ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
- 23ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
Cross references
- Ezekiel 38:23 ಯೆಹೆಜ್ಕೇಲನು 38:23ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Exodus 9:16 ವಿಮೋಚನಕಾಂಡ 9:16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
- Isaiah 37:20 ಯೆಶಾಯ 37:20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- Ezekiel 36:23 ಯೆಹೆಜ್ಕೇಲನು 36:23ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 38:16 ಯೆಹೆಜ್ಕೇಲನು 38:16ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
- Exodus 7:4 ವಿಮೋಚನಕಾಂಡ 7:4ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು.
- 1 Samuel 5:11 1 ಸಮುವೇಲನು 5:11ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
- Exodus 14:4 ವಿಮೋಚನಕಾಂಡ 14:4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
- Exodus 8:19 ವಿಮೋಚನಕಾಂಡ 8:19ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.
- Ezekiel 39:13 ಯೆಹೆಜ್ಕೇಲನು 39:13ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
- 1 Samuel 5:7 1 ಸಮುವೇಲನು 5:7ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.