Ezekiel · chapter 4 · verse 1
Ezekiel 4:1 in Kannada
ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.
Idallade manushyaputrane, neenu ondu hanchannu tegedukondu ninna mundittu adara mele yeroosalem nagarada naksheyannu bare.
Ezekiel 4:1 in English
- King James Version (KJV)
- Thou also, son of man, take thee a tile, and lay it before thee, and pourtray upon it the city, [even] Jerusalem:
- World English Bible (WEB)
- “You also, son of man, take a tile, and lay it before yourself, and portray on it a city, even Jerusalem.
- American Standard Version (ASV)
- Thou also, son of man, take thee a tile, and lay it before thee, and portray upon it a city, even Jerusalem:
- Bible in Basic English (BBE)
- And you, son of man, take a back and put it before you and on it make a picture of a town, even Jerusalem.
- Darby Translation (DBY)
- And thou, son of man, take thee a brick, and lay it before thee, and portray upon it a city, — Jerusalem:
- Webster's Bible (WBS)
- Thou also, son of man, take thee a tile, and lay it before thee, and pourtray upon it the city, [even] Jerusalem;
- Young's Literal Translation (YLT)
- 'And thou, son of man, take to thee a brick, and thou hast put it before thee, and hast graven on it a city — Jerusalem,
Read in context
- 1ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.
- 2ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
- 3ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು.
Cross references
- Hosea 1:2–9 ಹೋಶೇಯ 1:2–9ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ. ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು. ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು. ಆ ದಿನದಲ್ಲಿ ಆಗುವದೇನಂದರೆ--ನಾನು ಇಸ್ರಾಯೇಲಿನ ಬಿಲ್ಲನ್ನು ಇಜ್ರೇಲಿನ ತಗ್ಗಿನಲ್ಲಿ ಮುರಿದು ಹಾಕುವೆನು ಅಂದನು. ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ. ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು. ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- Hosea 12:10 ಹೋಶೇಯ 12:10ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
- Hosea 3:1–5 ಹೋಶೇಯ 3:1–5ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು. ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು. ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು. ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Jeremiah 32:31 ಯೆರೆಮೀಯ 32:31ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
- Ezekiel 5:1–17 ಯೆಹೆಜ್ಕೇಲನು 5:1–17ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು. ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು. ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು. ದೇವರಾದ ಕರ್ತನು ಹೇಳುವದೇನಂದರೆ--ಇದೇ ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ಮಧ್ಯೆ ಇಟ್ಟಿದ್ದೇನೆ. ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ. ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ. ನಾನು ಮಾಡದೇ ಇದ್ದದ್ದನ್ನೂ ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿನ್ನ ಅಸಹ್ಯಗಳ ನಿಮಿತ್ತ ವಾಗಿ ನಿನ್ನಲ್ಲಿ ಮಾಡುತ್ತೇನೆ. ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು. ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ. ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು. ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು. ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ. ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ. ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ. ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- 1 Samuel 15:27–28 1 ಸಮುವೇಲನು 15:27–28ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು. ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- Jeremiah 19:1–15 ಯೆರೆಮೀಯ 19:1–15ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು. ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು. ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ. ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು. ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು. ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು. ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ, ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು. ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು. ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು. ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
- Jeremiah 18:2–12 ಯೆರೆಮೀಯ 18:2–12ಎದ್ದು ಕುಂಬಾರನ ಮನೆಗೆ ಇಳಿದು ಹೋಗು; ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೇಳಮಾಡುವೆನು ಎಂಬದೇ. ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು. ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು. ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ. ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು. ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು. ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು. ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.
- Jeremiah 6:6 ಯೆರೆಮೀಯ 6:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- Ezekiel 12:3–16 ಯೆಹೆಜ್ಕೇಲನು 12:3–16ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು. ನಿನ್ನ ಸಾಮಾಗ್ರಿಗಳನ್ನು ತೆಗೆದುಹಾಕು ವದಕ್ಕಾಗುವಂತ ಸಾಮಾಗ್ರಿಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು; ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ನೀನು ಅವರ ಕಣ್ಣುಗಳ ಮುಂದೆಹೋಗಬೇಕು. ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು. ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ. ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು. ಬೆಳಗಿನ ಜಾವದಲ್ಲಿ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ-- ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ. ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ. ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು. ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು. ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು. ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು. ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Jeremiah 13:1–14 ಯೆರೆಮೀಯ 13:1–14ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು; ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು. ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು. ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು. ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು. ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು. ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು. ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು. ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ. ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು. ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 25:15–38 ಯೆರೆಮೀಯ 25:15–38ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ. ಅವರು ಪಾತ್ರೆಯನ್ನು ನಿನ್ನ ಕೈಯಿಂದ ತಕ್ಕೊಂಡು ಕುಡಿಯಲು ತಿರಸ್ಕರಿಸಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ಕುಡಿಯಬೇಕು. ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ. ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು. ಭೂಮಿಯ ಅಂತ್ಯಗಳ ವರೆಗೆ ಘೋಷವು ಬರು ವದು; ಕರ್ತನಿಗೆ ಜನಾಂಗಗಳ ಸಂಗಡ ವ್ಯಾಜ್ಯವದೆ; ಆತನು ಎಲ್ಲಾ ಮನುಷ್ಯರ ಸಂಗಡ ವಾದಿಸುವನು; ದುಷ್ಟರನ್ನು ಕತ್ತಿಗೆ ಒಪ್ಪಿಸುವೆನೆಂದು ಕರ್ತನು ಅನ್ನುತ್ತಾನೆ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವದು; ಭೂಮಿಯ ಮೇರೆಗಳಿಂದ ಮಹಾಬಿರುಗಾಳಿ ಎಬ್ಬಿಸ ಲ್ಪಡುವದು. ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ. ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು. ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು. ಕರ್ತನು ಅವರ ಮೇವಿನ ಸ್ಥಳವನ್ನು ಹಾಳುಮಾಡಿದ್ದಾನೆ. ಸಮಾಧಾನವುಳ್ಳ ನಿವಾಸಗಳು ಕರ್ತನ ಕೋಪದ ಉರಿಯಿಂದ ಕೆಡವಲ್ಪಟ್ಟವು.ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು. ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.