Ezekiel · chapter 40 · verse 39
Ezekiel 40:39 in Kannada
ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
Baagala dvaaraanganadalli eradu mejugalu aa kadege iddavu. Dahanabali yannoo paapa baliyannoo aparaadha baliyannoo vadhisuva haage avu iddavu.
Ezekiel 40:39 in English
- King James Version (KJV)
- And in the porch of the gate [were] two tables on this side, and two tables on that side, to slay thereon the burnt offering and the sin offering and the trespass offering.
- World English Bible (WEB)
- In the porch of the gate were two tables on this side and two tables on that side, on which to kill the burnt offering, the sin offering, and the trespass offering.
- American Standard Version (ASV)
- And in the porch of the gate were two tables on this side, and two tables on that side, to slay thereon the burnt-offering and the sin-offering and the trespass-offering.
- Bible in Basic English (BBE)
- And in the covered way of the doorway there were two tables on this side and two tables on that side, on which the burned offering and the sin-offering and the offering for error were put to death:
- Darby Translation (DBY)
- And in the porch of the gate were two tables on this side, and two tables on that side, to slay thereon the burnt-offering and the sin-offering and the trespass-offering.
- Webster's Bible (WBS)
- And in the porch of the gate [were] two tables on this side, and two tables on that side, to slay upon it the burnt-offering and the sin-offering and the trespass-offering.
- Young's Literal Translation (YLT)
- And in the porch of the gate [are] two tables on this side, and two tables on that side, to slaughter on them the burnt-offering, and the sin-offering, and the guilt-offering;
Read in context
- 37ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
- 38ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;
- 39ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
- 40ಹೊರಗಡೆಯಲ್ಲಿ ಉತ್ತರದ ಬಾಗಲಿನ ಪ್ರವೇಶಕ್ಕೆ ಏರಿಹೋಗುವಲ್ಲಿ ಎರಡು ಮೇಜುಗಳೂ ಬಾಗಲಿನ ದ್ವಾರಾಂಗಣದ ಕಡೆಯಲ್ಲಿ ಎರಡು ಮೇಜುಗಳೂ ಇದ್ದವು.
- 41ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು.
Cross references
- Ezekiel 46:2 ಯೆಹೆಜ್ಕೇಲನು 46:2ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
- Leviticus 1:3–17 ಯಾಜಕಕಾಂಡ 1:3–17ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು. ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು. ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು. ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು; ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು. ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು. ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು. ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು. ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು. ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು. ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು. ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
- Leviticus 4:2–3 ಯಾಜಕಕಾಂಡ 4:2–3ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ, ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
- Ezekiel 40:42 ಯೆಹೆಜ್ಕೇಲನು 40:42ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Ezekiel 41:22 ಯೆಹೆಜ್ಕೇಲನು 41:22ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Luke 22:30 ಲೂಕನು 22:30ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Isaiah 53:5 ಯೆಶಾಯ 53:5ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
- Leviticus 5:6–13 ಯಾಜಕಕಾಂಡ 5:6–13ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು; ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು. ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು. ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ. ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು. ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ. ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು. ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
- 1 Corinthians 10:16–21 1 ಕೊರಿಂಥದವರಿಗೆ 10:16–21ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ? ಅನೇಕರಾದ ನಾವು ಒಂದೇರೊಟ್ಟಿಯೂ ಒಂದೇದೇಹವೂ ಆಗಿದ್ದೇವೆ; ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲುಗಾರರಾಗಿದ್ದೇವೆ. ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ? ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ? ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ. ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
- Leviticus 6:6 ಯಾಜಕಕಾಂಡ 6:6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.