Ezekiel · chapter 43 · verse 11
Ezekiel 43:11 in Kannada
ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
Avaru maadiddakkaagi naachikepattare maneya roopavannoo aakaaravannoo horadona baronagalannu adara ellaa niyamagalannoo adara ellaa nyaayapramaana galannnoo avarige torisu; adara ellaa niyama galannoo kaigondu avaru avugalannu maaduva haage avara drushtiyalliye avugalannu bare,
Ezekiel 43:11 in English
- King James Version (KJV)
- And if they be ashamed of all that they have done, shew them the form of the house, and the fashion thereof, and the goings out thereof, and the comings in thereof, and all the forms thereof, and all the ordinances thereof, and all the forms thereof, and all the laws thereof: and write [it] in their sight, that they may keep the whole form thereof, and all the ordinances thereof, and do them.
- World English Bible (WEB)
- If they are ashamed of all that they have done, make known to them the form of the house, its fashion, its exits, its entrances, its structure, all its ordinances, all its forms, and all its laws; and write it in their sight, that they may keep the whole form of it, and all its ordinances, and do them.
- American Standard Version (ASV)
- And if they be ashamed of all that they have done, make known unto them the form of the house, and the fashion thereof, and the egresses thereof, and the entrances thereof, and all the forms thereof, and all the ordinances thereof, and all the forms thereof, and all the laws thereof; and write it in their sight; that they may keep the whole form thereof, and all the ordinances thereof, and do them.
- Bible in Basic English (BBE)
- And they will be shamed by what they have done; so give them the knowledge of the form of the house and its structure, and the ways out of it and into it, and all its laws and its rules, writing it down for them: so that they may keep all its laws and do them.
- Darby Translation (DBY)
- And if they be confounded at all that they have done, make known to them the form of the house, and its fashion, and its goings out, and its comings in, and all its forms, and all its statutes, yea, all the forms thereof, and all the laws thereof; and write it in their sight, that they may keep the whole form thereof, and all the statutes thereof, and do them.
- Webster's Bible (WBS)
- And if they shall be ashamed of all that they have done, show them the form of the house, and the fashion of it, and its goings out, and its comings in, and all its forms, and all its ordinances, and all its forms, and all its laws: and write [it] in their sight, that they may keep the whole form of it, and all its ordinances, and do them.
- Young's Literal Translation (YLT)
- And since they have been ashamed of all that they have done, The form of the house, and its measurement, And its outlets, and its inlets, and all its forms, And all its statutes, even all its forms, And all its laws cause them to know, And write [it] before their eyes, And they observe all its forms, And all its statutes, and have done them.
Read in context
- 9ಈಗ ಅವರು ಅವರ ವ್ಯಭಿಚಾರವನ್ನು ಮತ್ತು ಅವರ ಅರಸರ ಹೆಣಗಳನ್ನು ನನ್ನಿಂದ ದೂರವಾಗಿಡಲಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ ಅಂದನು.
- 10ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ಮನೆಯನ್ನು ತೋರಿಸು ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಮಾದರಿಯನ್ನು ಅಳೆಯಲಿ.
- 11ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
- 12ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
- 13ಈ ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರವೇ ಇವೆ; ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ; ಕೆಳಭಾಗದ ಎತ್ತರವು ಒಂದು ಮೊಳ, ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ; ಸುತ್ತಲೂ ದಿಂಡಿನ ಅಗಲವು ಒಂದು ಮೊಳ; ಇದೇ ಯಜ್ಞವೇದಿಯ ಉನ್ನತ ಸ್ಥಳ.
Cross references
- Ezekiel 11:20 ಯೆಹೆಜ್ಕೇಲನು 11:20ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
- Ezekiel 36:27 ಯೆಹೆಜ್ಕೇಲನು 36:27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Ezekiel 12:3 ಯೆಹೆಜ್ಕೇಲನು 12:3ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
- Ezekiel 40:1–42 ಯೆಹೆಜ್ಕೇಲನು 40:1–42ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು. ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು. ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು. ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು. ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು. ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು. ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು. ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು. ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು. ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು. ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು. ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು. ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು. ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು. ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು. ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು. ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು. ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು. ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು. ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು. ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ. ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು. ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು. ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು. ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ; ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು. ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು. ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು; ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ; ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು. ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು. ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು. ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ. ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು. ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು; ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ; ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು. ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು; ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು. ಹೊರಗಡೆಯಲ್ಲಿ ಉತ್ತರದ ಬಾಗಲಿನ ಪ್ರವೇಶಕ್ಕೆ ಏರಿಹೋಗುವಲ್ಲಿ ಎರಡು ಮೇಜುಗಳೂ ಬಾಗಲಿನ ದ್ವಾರಾಂಗಣದ ಕಡೆಯಲ್ಲಿ ಎರಡು ಮೇಜುಗಳೂ ಇದ್ದವು. ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು. ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು.
- Ezekiel 44:5–6 ಯೆಹೆಜ್ಕೇಲನು 44:5–6ಕರ್ತನು ನನಗೆ ಹೇಳಿದ್ದೇ ನಂದರೆ--ಮನುಷ್ಯಪುತ್ರನೇ, ಕರ್ತನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನ್ಯಾಯ ಪ್ರಮಾಣದ ವಿಷಯವಾಗಿಯೂ ನಾನು ನಿನಗೆ ಹೇಳುವದನ್ನೆಲ್ಲಾ ನೀವು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನದಟ್ಟು ಮಾಡಿಕೋ; ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧ ಸ್ಥಳದ ಪ್ರತಿಯೊಂದು ಹಾದು ಹೋಗುವವುಗಳನ್ನೂ ಗಮನಿಸು. ತಿರುಗಿ ಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾ ದದ್ದೇನಂದರೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ;
- John 13:17 ಯೋಹಾನನು 13:17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- 1 Corinthians 11:2 1 ಕೊರಿಂಥದವರಿಗೆ 11:2ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
Original words (Hebrew)
- ashamed · H3637כָּלַם kâlam
- done · H6213עָשָׂה ʻâsâh
- shew · H3045יָדַע yâdaʻ
- form · H6699צוּרָה tsûwrâh
- house · H1004בַּיִת bayith
- fashion · H8498תְּכוּנָה tᵉkûwnâh
- out · H4161מוֹצָא môwtsâʼ
- comings · H4126מוֹבָא môwbâʼ
- forms · H6699צוּרָה tsûwrâh
- ordinances · H2708חֻקָּה chuqqâh
- forms · H6699צוּרָה tsûwrâh
- laws · H8451תּוֹרָה tôwrâh
- write · H3789כָּתַב kâthab
- sight · H5869עַיִן ʻayin
- keep · H8104שָׁמַר shâmar
- form · H6699צוּרָה tsûwrâh
- ordinances · H2708חֻקָּה chuqqâh
- do · H6213עָשָׂה ʻâsâh