Ezekiel · chapter 43 · verse 3
Ezekiel 43:3 in Kannada
ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
Idu, naanu nodida darshanada torvikeya prakaara ittu naanu pattanavannu naashamaaduvadakke bandaaga nodida aa darshanada haageye ittu; naanu kebaar nadiya dadada mele nodida darshanagala haage ittu; aaga naanu boralu biddenu.
Ezekiel 43:3 in English
- King James Version (KJV)
- And [it was] according to the appearance of the vision which I saw, [even] according to the vision that I saw when I came to destroy the city: and the visions [were] like the vision that I saw by the river Chebar; and I fell upon my face.
- World English Bible (WEB)
- It was like the appearance of the vision which I saw, even according to the vision that I saw when I came to destroy the city; and the visions were like the vision that I saw by the river Chebar; and I fell on my face.
- American Standard Version (ASV)
- And it was according to the appearance of the vision which I saw, even according to the vision that I saw when I came to destroy the city; and the visions were like the vision that I saw by the river Chebar; and I fell upon my face.
- Bible in Basic English (BBE)
- And the vision which I saw was like the vision I had seen when he came for the destruction of the town: and like the vision which I saw by the river Chebar; and I went down on my face.
- Darby Translation (DBY)
- And the appearance of the vision that I saw was according to the vision that I had seen when I came to destroy the city; and the visions were like the vision that I saw by the river Chebar: and I fell upon my face.
- Webster's Bible (WBS)
- And [it was] according to the appearance of the vision which I saw, [even] according to the vision that I saw when I came to destroy the city: and the visions [were] like the vision that I saw by the river Kebar; and I fell upon my face.
- Young's Literal Translation (YLT)
- And according to the appearance [is] the appearance that I saw, as the appearance that I saw in my coming in to destroy the city, and the appearances [are] as the appearance that I saw at the river Chebar, and I fall on my face.
Read in context
- 1ಆ ಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಲಿಗೆ ಕರೆದು ಕೊಂಡು ಹೋದನು;
- 2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
- 3ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು.
- 4ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
- 5ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆ ತಂದಿತು; ಇಗೋ, ಕರ್ತನ ಮಹಿಮೆ ಯಿಂದ ಆಲಯವು ತುಂಬಿಕೊಂಡಿತ್ತು.
Cross references
- Ezekiel 9:5 ಯೆಹೆಜ್ಕೇಲನು 9:5ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
- Ezekiel 9:1 ಯೆಹೆಜ್ಕೇಲನು 9:1ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ
- Ezekiel 32:18 ಯೆಹೆಜ್ಕೇಲನು 32:18ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
- Ezekiel 1:3–28 ಯೆಹೆಜ್ಕೇಲನು 1:3–28ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು. ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು. ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು. ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು. ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು. ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು. ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು. ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು. ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು. ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ. ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು. ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು. ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು. ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ. ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು. ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು. ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು. ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು. ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು). ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು. ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು. ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು. ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು. ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- Ezekiel 3:23 ಯೆಹೆಜ್ಕೇಲನು 3:23ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- Ezekiel 8:4 ಯೆಹೆಜ್ಕೇಲನು 8:4ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.
- Ezekiel 9:3 ಯೆಹೆಜ್ಕೇಲನು 9:3ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
- Ezekiel 11:22–23 ಯೆಹೆಜ್ಕೇಲನು 11:22–23ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು. ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.
- Revelation 11:3–6 ಪ್ರಕಟನೆ 11:3–6ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು. ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ. ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು. ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
- Ezekiel 10:1–22 ಯೆಹೆಜ್ಕೇಲನು 10:1–22ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು. ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು. ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು. ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು. ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು. ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ. ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು. ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು. ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು. ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು. ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
Original words (Hebrew)
- appearance · H4758מַרְאֶה marʼeh
- vision · H4758מַרְאֶה marʼeh
- saw · H7200רָאָה râʼâh
- vision · H4758מַרְאֶה marʼeh
- saw · H7200רָאָה râʼâh
- came · H935בּוֹא bôwʼ
- destroy · H7843שָׁחַת shâchath
- city · H5892עִיר ʻîyr
- visions · H4759מַרְאָה marʼâh
- vision · H4758מַרְאֶה marʼeh
- saw · H7200רָאָה râʼâh
- river · H5104נָהָר nâhâr
- Chebar · H3529כְּבָר Kᵉbâr
- fell · H5307נָפַל nâphal
- face · H6440פָּנִים pânîym