Ezekiel · chapter 44 · verse 24
Ezekiel 44:24 in Kannada
ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು.
Jagalavaaduvaaga avaru nyaayakkaagi nintu, nanna nyaayavidhigala prakaara avarige tilisabeku. Avaru nanna nyaayapramaanagalannoo niyamaga lannoo nanna sabhegalalli kaikollabeku; nanna sabbattu galannu parishuddhapadisabeku.
Ezekiel 44:24 in English
- King James Version (KJV)
- And in controversy they shall stand in judgment; [and] they shall judge it according to my judgments: and they shall keep my laws and my statutes in all mine assemblies; and they shall hallow my sabbaths.
- World English Bible (WEB)
- “‘“In a controversy they shall stand to judge. They shall judge it according to my ordinances. They shall keep my laws and my statutes in all my appointed feasts. They shall make my Sabbaths holy.
- American Standard Version (ASV)
- And in a controversy they shall stand to judge; according to mine ordinances shall they judge it: and they shall keep my laws and my statutes in all my appointed feasts; and they shall hallow my sabbaths.
- Bible in Basic English (BBE)
- In any cause, they are to be in the position of judges, judging in harmony with my decisions: they are to keep my laws and my rules in all my fixed feasts; and they are to keep my Sabbaths holy.
- Darby Translation (DBY)
- And in controversy they shall stand to judge: they shall judge it according to my judgments; and they shall keep my laws and my statutes in all my solemnities; and they shall hallow my sabbaths.
- Webster's Bible (WBS)
- And in controversy they shall stand in judgment; [and] they shall judge it according to my judgments: and they shall keep my laws and my statutes in all my assemblies; and they shall hallow my sabbaths.
- Young's Literal Translation (YLT)
- And concerning controversy, they stand up for judgment; with My judgments they judge it; and My law and My statutes in all My appointed places they keep; and My sabbaths they sanctify.
Read in context
- 22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
- 23ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
- 24ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು.
- 25ಅವರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆ ತಾಯಿ, ಮಗ, ಮಗಳು, ಸಹೋದರ, ಮತ್ತು ಗಂಡ ಇಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.
- 26ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.
Cross references
- 1 Chronicles 23:4 1 ಪೂರ್ವಕಾಲವೃತ್ತಾಂತ 23:4ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು.
- 2 Chronicles 19:8–10 2 ಪೂರ್ವಕಾಲವೃತ್ತಾಂತ 19:8–10ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ-- ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು. ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
- Ezekiel 22:26 ಯೆಹೆಜ್ಕೇಲನು 22:26ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು.
- Isaiah 58:13–14 ಯೆಶಾಯ 58:13–14ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ. ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Leviticus 23:1–44 ಯಾಜಕಕಾಂಡ 23:1–44ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ, ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು. ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು. ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು. ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು. ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು. ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು. ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು. ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು. ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು. ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು. ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು. ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು. ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು. ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು. ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು. ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು. ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು. ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- Ezra 2:63 ಎಜ್ರನು 2:63ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
- Numbers 28:1–29 ಅರಣ್ಯಕಾಂಡ 28:1–29ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
- 1 Timothy 3:15 1 ತಿಮೊಥೆಯನಿಗೆ 3:15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Deuteronomy 17:8–13 ಧರ್ಮೋಪದೇಶಕಾಂಡ 17:8–13ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು. ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು. ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು. ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು; ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
- Nehemiah 8:1–18 ನೆಹೆಮೀಯ 8:1–18ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು. ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು. ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು. ಎಜ್ರನು ಸಕಲ ಜನರ ಕಣ್ಣುಗಳ ಮುಂದೆ ಪುಸ್ತಕವನ್ನು ತೆರೆದನು; (ಯಾಕಂದರೆ ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ಇದ್ದನು;) ಅವನು ಅದನ್ನು ತೆರೆದಾಗ ಜನರೆಲ್ಲರೂ ಎದ್ದು ನಿಂತರು. ಆಗ ಎಜ್ರನು ಮಹಾ ದೇವಾರಾಗಿರುವ ಕರ್ತನನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಪ್ರತ್ಯುತ್ತರವಾಗಿ--ಆಮೆನ್, ಆಮೆನ್ ಎಂದು ಹೇಳಿ ನೆಲದ ವರೆಗೂ ತಮ್ಮ ತಲೆಗಳನ್ನು ಬೊಗ್ಗಿಸಿ ಕರ್ತ ನನ್ನು ಆರಾಧಿಸಿದರು ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು. ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು. ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು. ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ. ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು. ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು. ಎರಡನೇ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿ ರುವ ಮುಖ್ಯರಾದವರೂ ಯಾಜಕರೂ ಲೇವಿಯರೂ ನ್ಯಾಯಪ್ರಮಾಣದ ಮಾತುಗಳನ್ನು ತಿಳುಕೊಳ್ಳುವ ಹಾಗೆ ಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು. ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು. ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ. ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು. ಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು. ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
Original words (Hebrew)
- controversy · H7379רִיב rîyb
- stand · H5975עָמַד ʻâmad
- judgment · H8199שָׁפַט shâphaṭ
- judge · H8199שָׁפַט shâphaṭ
- judgments · H4941מִשְׁפָּט mishpâṭ
- keep · H8104שָׁמַר shâmar
- laws · H8451תּוֹרָה tôwrâh
- statutes · H2708חֻקָּה chuqqâh
- assemblies · H4150מוֹעֵד môwʻêd
- hallow · H6942קָדַשׁ qâdash
- sabbaths · H7676שַׁבָּת shabbâth