Ezekiel · chapter 45 · verse 17
Ezekiel 45:17 in Kannada
ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
Habbagalalliyoo amaa vaasyegalalliyoo sabbattugalalliyoo israayelina manetanadavara ellaa sabhegalalliyoo homa galannu arpanegalannu naivedyagalannu koduvadu prabhuvina kelasavaagiruvadu; avane israaye lina manetanadavarigaagi samaadhaanakkaagi paapabali yannoo arpaneyannoo dahanabaliyannoo samaadhaana yajnyavannoo siddhamaadabeku.
Ezekiel 45:17 in English
- King James Version (KJV)
- And it shall be the prince’s part [to give] burnt offerings, and meat offerings, and drink offerings, in the feasts, and in the new moons, and in the sabbaths, in all solemnities of the house of Israel: he shall prepare the sin offering, and the meat offering, and the burnt offering, and the peace offerings, to make reconciliation for the house of Israel.
- World English Bible (WEB)
- It shall be the prince’s part to give the burnt offerings, the meal offerings, and the drink offerings, in the feasts, and on the new moons, and on the Sabbaths, in all the appointed feasts of the house of Israel. He shall prepare the sin offering, the meal offering, the burnt offering, and the peace offerings, to make atonement for the house of Israel.”
- American Standard Version (ASV)
- And it shall be the prince’s part to give the burnt-offerings, and the meal-offerings, and the drink-offerings, in the feasts, and on the new moons, and on the sabbaths, in all the appointed feasts of the house of Israel: he shall prepare the sin-offering, and the meal-offering, and the burnt-offering, and the peace-offerings, to make atonement for the house of Israel.
- Bible in Basic English (BBE)
- And the ruler will be responsible for the burned offering and the meal offering and the drink offering, at the feasts and the new moons and the Sabbaths, at all the fixed feasts of the children of Israel: he will give the sin-offering and meal offering and burned offering and the peace-offerings, to take away the sin of the children of Israel.
- Darby Translation (DBY)
- And it shall be the prince's part [to supply] the burnt-offerings, and the oblation, and the drink-offering, at the feasts, and at the new moons, and on the sabbaths, in all the solemnities of the house of Israel: it is he that shall prepare the sin-offering, and the oblation, and the burnt-offering, and the peace-offerings, to make atonement for the house of Israel.
- Webster's Bible (WBS)
- And it shall be the prince's part [to give] burnt-offerings, and meat-offerings, and drink-offerings, in the feasts, and in the new moons, and in the sabbaths, in all solemnities of the house of Israel: he shall prepare the sin-offering, and the meat-offering, and the burnt-offering, and the peace-offerings, to make reconciliation for the house of Israel.
- Young's Literal Translation (YLT)
- And on the prince are the burnt-offerings, and the present, and the libation, in feasts, and in new moons, and in sabbaths, in all appointed times of the house of Israel: he doth make the sin-offering, and the present, and the burnt-offering, and the peace-offerings, to make atonement for the house of Israel.
Read in context
- 15ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ.
- 16ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು.
- 17ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
- 18ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮೊದಲನೇ ತಿಂಗಳಿನ ಮೊದಲನೇ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೇಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡ ಬೇಕು.
- 19ಯಾಜಕನು ಪಾಪಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆ ಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;
Cross references
- Isaiah 66:23 ಯೆಶಾಯ 66:23ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- 2 Chronicles 31:3 2 ಪೂರ್ವಕಾಲವೃತ್ತಾಂತ 31:3ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
- Ezekiel 46:4–12 ಯೆಹೆಜ್ಕೇಲನು 46:4–12ಪ್ರಧಾನರು ಕರ್ತನಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು. ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು; ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು. ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು. ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು. ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು. ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು. ಪರಿಶುದ್ಧ ಹಬ್ಬಗಳಲ್ಲಿಯೂ ಸಭೆಗಳ ಲ್ಲಿಯೂ ಆಹಾರದ ಅರ್ಪಣೆಗೆ ಹೋರಿಗೆ ಒಂದು ಏಫವೂ ಟಗರಿಗೆ ಒಂದು ಏಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು. ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು.
- 2 Chronicles 30:24 2 ಪೂರ್ವಕಾಲವೃತ್ತಾಂತ 30:24ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.
- Leviticus 23:1–44 ಯಾಜಕಕಾಂಡ 23:1–44ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ, ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು. ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು. ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು. ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು. ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು. ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು. ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು. ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು. ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು. ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು. ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು. ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು. ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು. ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು. ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು. ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು. ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು. ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- Ezekiel 43:27 ಯೆಹೆಜ್ಕೇಲನು 43:27ಈ ದಿನಗಳು ತೀರಿದಾಗ ಎಂಟನೇ ದಿನದ ತರುವಾಯ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- 1 Kings 8:63–64 1 ಅರಸುಗಳು 8:63–64ಸೊಲೊಮೋನನು ಕರ್ತನಿಗೆ ಅರ್ಪಿಸಿದ ಸಮಾ ಧಾನದ ಬಲಿಗಳಿಗೋಸ್ಕರ ಇಪ್ಪತ್ತೆರಡು ಸಾವಿರ ಎತ್ತು ಗಳನ್ನೂ ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ ಇಸ್ರಾಯೇಲಿನ ಸಮಸ್ತ ಮಕ್ಕಳೂ ಕರ್ತನ ಮಂದಿರವನ್ನು ಪ್ರತಿಷ್ಠೆ ಮಾಡಿದರು. ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- Numbers 28:1–29 ಅರಣ್ಯಕಾಂಡ 28:1–29ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
- John 1:16 ಯೋಹಾನನು 1:16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- 2 Chronicles 35:7–8 2 ಪೂರ್ವಕಾಲವೃತ್ತಾಂತ 35:7–8ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
- 2 Samuel 6:19 2 ಸಮುವೇಲನು 6:19ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
- 2 Chronicles 8:12–13 2 ಪೂರ್ವಕಾಲವೃತ್ತಾಂತ 8:12–13ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು. ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
Original words (Hebrew)
- prince’s part · H5387נָשִׂיא nâsîyʼ
- offerings · H5930עֹלָה ʻôlâh
- offerings · H4503מִנְחָה minchâh
- offerings · H5262נֶסֶךְ neçek
- feasts · H2282חַג chag
- moons · H2320חֹדֶשׁ chôdesh
- sabbaths · H7676שַׁבָּת shabbâth
- solemnities · H4150מוֹעֵד môwʻêd
- house · H1004בַּיִת bayith
- Israel · H3478יִשְׂרָאֵל Yisrâʼêl
- prepare · H6213עָשָׂה ʻâsâh
- offering · H2403חַטָּאָה chaṭṭâʼâh
- offering · H4503מִנְחָה minchâh
- offering · H5930עֹלָה ʻôlâh
- offerings · H8002שֶׁלֶם shelem
- reconciliation · H3722כָּפַר kâphar
- house · H1004בַּיִת bayith
- Israel · H3478יִשְׂרָאֵל Yisrâʼêl