Ezekiel · chapter 46 · verse 10
Ezekiel 46:10 in Kannada
ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು.
Avaru olage hogu vaaga avara madhyadalliruva pradhaananu olage hogabeku. Horage hoguvaaga horage barabeku.
Ezekiel 46:10 in English
- King James Version (KJV)
- And the prince in the midst of them, when they go in, shall go in; and when they go forth, shall go forth.
- World English Bible (WEB)
- The prince shall go in with them when they go in. When they go out, he shall go out.
- American Standard Version (ASV)
- And the prince, when they go in, shall go in in the midst of them; and when they go forth, they shall go forth [together].
- Bible in Basic English (BBE)
- And the ruler, when they come in, is to come among them, and is to go out when they go out.
- Darby Translation (DBY)
- And the prince shall come in in the midst of them, when they come in; and when they go out, they shall go out [together].
- Webster's Bible (WBS)
- And the prince in the midst of them, when they go in, shall go in; and when they go forth, shall go forth.
- Young's Literal Translation (YLT)
- And the prince in their midst in their coming in cometh in, and in their going out he goeth out.
Read in context
- 8ಪ್ರಧಾನರು ಪ್ರವೇಶಿಸುವಾಗ, ಅವನು ಬಾಗಲಿನ ದ್ವಾರಾಂಗಣದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.
- 9ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು.
- 10ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು.
- 11ಪರಿಶುದ್ಧ ಹಬ್ಬಗಳಲ್ಲಿಯೂ ಸಭೆಗಳ ಲ್ಲಿಯೂ ಆಹಾರದ ಅರ್ಪಣೆಗೆ ಹೋರಿಗೆ ಒಂದು ಏಫವೂ ಟಗರಿಗೆ ಒಂದು ಏಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.
- 12ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು.
Cross references
- Psalm 42:4 ಕೀರ್ತನೆಗಳು 42:4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
- 1 Chronicles 29:22 1 ಪೂರ್ವಕಾಲವೃತ್ತಾಂತ 29:22ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.
- 1 Chronicles 29:20 1 ಪೂರ್ವಕಾಲವೃತ್ತಾಂತ 29:20ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.
- 2 Samuel 6:14–19 2 ಸಮುವೇಲನು 6:14–19ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು. ಈ ಪ್ರಕಾರ ದಾವೀದನೂ ಇಸ್ರಾಯೇಲ್ ಮನೆಯವರೆಲ್ಲರೂ ಕರ್ತನ ಮಂಜೂಷವನ್ನು ಆರ್ಭಟ ದಿಂದಲೂ ತುತೂರಿಯ ಶಬ್ದದಿಂದಲೂ ಬರಮಾಡಿ ದರು. ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು. ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ ಸ್ತ್ರೀ ಪುರುಷರಲ್ಲಿ ಒಬ್ಬೊಬ್ಬರಿಗೆ ಒಂದು ರೊಟ್ಟಿ ತುಂಡನ್ನೂ ಒಂದು ದೊಡ್ಡ ತುಂಡು ಮಾಂಸವನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಕೊಟ್ಟನು. ತರುವಾಯ ಜನರೆ ಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.
- 2 Chronicles 34:30–31 2 ಪೂರ್ವಕಾಲವೃತ್ತಾಂತ 34:30–31ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು. ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Nehemiah 8:8–9 ನೆಹೆಮೀಯ 8:8–9ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು. ಇದಲ್ಲದೆ ತಿರ್ಷತನಾದ ನೆಹೆವಿಾಯನೂ ಶಾಸ್ತ್ರಿ ಯೂ, ಯಾಜಕನೂ ಆದ ಎಜ್ರನೂ ಜನರನ್ನು ಬೋಧಿಸಿದ ಲೇವಿಯರೂ ಜನರೆಲ್ಲರಿಗೆ ಹೇಳಿದ್ದೇ ನಂದರೆ--ಈ ದಿನವು ನಿಮ್ಮ ದೇವರಾಗಿರುವ ಕರ್ತನಿಗೆ ಪರಿಶುದ್ಧವಾದದರಿಂದ ದುಃಖಿಸದೆ, ಅಳದೆ ಇರ್ರಿ. ಯಾಕಂದರೆ ಜನರೆಲ್ಲರು ನ್ಯಾಯಪ್ರಮಾಣದ ಮಾತು ಗಳನ್ನು ಕೇಳಿದಾಗ ಅತ್ತರು.
- Hebrews 3:6 ಇಬ್ರಿಯರಿಗೆ 3:6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- 2 Chronicles 7:4–5 2 ಪೂರ್ವಕಾಲವೃತ್ತಾಂತ 7:4–5ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು. ಅರಸನಾದ ಸೊಲೊ ಮೋನನು ಇಪ್ಪತ್ತೆರಡು ಸಾವಿರ ಎತ್ತುಗಳನ್ನೂ ಲಕ್ಷದ ಇಪ್ಪತ್ತುಸಾವಿರ ಕುರಿಗಳನ್ನೂ ಬಲಿಯಾಗಿ ಅರ್ಪಿಸಿ ದನು. ಹೀಗೆಯೇ ಅರಸನೂ ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆಮಾಡಿದರು.
- 2 Chronicles 20:27–28 2 ಪೂರ್ವಕಾಲವೃತ್ತಾಂತ 20:27–28ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.
- Psalm 122:1–4 ಕೀರ್ತನೆಗಳು 122:1–4ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು. ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ. ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ. ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
- 2 Chronicles 29:28–29 2 ಪೂರ್ವಕಾಲವೃತ್ತಾಂತ 29:28–29ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು. ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು.