Ezekiel · chapter 46 · verse 15
Ezekiel 46:15 in Kannada
ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
Heege avaru kurimariyannu aahaarada arpaneyannu enneyannu pratidinada munjaaneyalli edebidade dahanabaliyannaagi siddhamaadabeku.
Ezekiel 46:15 in English
- King James Version (KJV)
- Thus shall they prepare the lamb, and the meat offering, and the oil, every morning [for] a continual burnt offering.
- World English Bible (WEB)
- Thus they shall prepare the lamb, the meal offering, and the oil, morning by morning, for a continual burnt offering.”
- American Standard Version (ASV)
- Thus shall they prepare the lamb, and the meal-offering, and the oil, morning by morning, for a continual burnt-offering.
- Bible in Basic English (BBE)
- And they are to give the lamb and the meal offering and the oil, morning by morning, for a burned offering at all times.
- Darby Translation (DBY)
- They shall offer the lamb, and the oblation, and the oil, every morning for a continual burnt-offering.
- Webster's Bible (WBS)
- Thus shall they prepare the lamb, and the meat-offering, and the oil, every morning [for] a continual burnt-offering.
- Young's Literal Translation (YLT)
- and prepare ye the lamb, and the present, and the oil, morning by morning, a continual burnt-offering.
Read in context
- 13ನೀನು ಪ್ರತಿದಿನವೂ ಕರ್ತನಿಗೆ ಒಂದು ವರುಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ದಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.
- 14ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.
- 15ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
- 16ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರಧಾನನು ತನ್ನ ಕುಮಾರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಅದು ಬಾಧ್ಯವಾಗಿ ಅವರ ಸ್ವಾಸ್ತ್ಯವಾಗಿದೆ.
- 17ಆದರೆ ಆತನು ತನ್ನ ಸ್ವಾಸ್ತ್ಯದೊಳ ಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರುಷದ ವರೆಗೂ ಅವನಿಗಾಗಿ ರುವದು; ಆ ಮೇಲೆ ಮತ್ತೆ ಪ್ರಧಾನನಿಗೆ ಸೇರಬೇಕು. ಅವನ ಸ್ವಾಸ್ಥ್ಯವು ಅವನ ಕುಮಾರರಿಗೆ ಮಾತ್ರ ಸಲ್ಲಬೇಕು.
Cross references
- Hebrews 10:1–10 ಇಬ್ರಿಯರಿಗೆ 10:1–10ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು. ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ. ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು. ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- Exodus 29:42 ವಿಮೋಚನಕಾಂಡ 29:42ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- Numbers 28:6 ಅರಣ್ಯಕಾಂಡ 28:6ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.