Ezekiel · chapter 48 · verse 10
Ezekiel 48:10 in Kannada
ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು.
Avarigaagi andare yaajakarigaagi parishuddha kaanike irabeku, adu uttarakke ippattaidu saavira, pashchimakke hattu saavira agalavoo poorvakke hattu saavira agalavoo dakshinakke ippattaidu saavira uddavoo irabeku; adara madhyadalli kartana parishuddha sthalavoo irabeku.
Ezekiel 48:10 in English
- King James Version (KJV)
- And for them, [even] for the priests, shall be [this] holy oblation; toward the north five and twenty thousand [in length], and toward the west ten thousand in breadth, and toward the east ten thousand in breadth, and toward the south five and twenty thousand in length: and the sanctuary of the LORD shall be in the midst thereof.
- World English Bible (WEB)
- For these, even for the priests, shall be the holy offering: toward the north twenty-five thousand in length, and toward the west ten thousand in width, and toward the east ten thousand in width, and toward the south twenty-five thousand in length; and the sanctuary of the LORD shall be in the middle of it.
- American Standard Version (ASV)
- And for these, even for the priests, shall be the holy oblation; toward the north five and twenty thousand [in length], and toward the west ten thousand in breadth, and toward the east ten thousand in breadth, and toward the south five and twenty thousand in length: and the sanctuary of Jehovah shall be in the midst thereof.
- Bible in Basic English (BBE)
- And for these, that is the priests, the holy offering is to be twenty-five thousand long to the north, ten thousand wide to the west, ten thousand wide to the east and twenty-five thousand long to the south; and the holy place of the Lord will be in the middle of it.
- Darby Translation (DBY)
- And for them, for the priests, shall be the holy heave-offering, toward the north five and twenty thousand, and toward the west the breadth ten thousand, and toward the east the breadth ten thousand, and toward the south the length five and twenty thousand: and the sanctuary of Jehovah shall be in the midst of it.
- Webster's Bible (WBS)
- And for them, [even] for the priests, shall be [this] holy oblation; towards the north five and twenty thousand [in length] , and towards the west ten thousand in breadth, and towards the east ten thousand in breadth, and towards the south five and twenty thousand in length: and the sanctuary of the LORD shall be in the midst of it.
- Young's Literal Translation (YLT)
- And of these is the holy heave-offering for the priests, northward five and twenty thousand, and westward [in] breadth ten thousand, and eastward [in] breadth ten thousand, and southward [in] length five and twenty thousand: and the sanctuary of Jehovah hath been in its midst.
Read in context
- 8ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು.
- 9ನೀವು ಕರ್ತನಿಗೆ ಅರ್ಪಿಸುವಂತ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು;
- 10ಅವರಿಗಾಗಿ ಅಂದರೆ ಯಾಜಕರಿಗಾಗಿ ಪರಿಶುದ್ಧ ಕಾಣಿಕೆ ಇರಬೇಕು, ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು; ಅದರ ಮಧ್ಯದಲ್ಲಿ ಕರ್ತನ ಪರಿಶುದ್ಧ ಸ್ಥಳವೂ ಇರಬೇಕು.
- 11ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
- 12ಅರ್ಪಿಸಲ್ಪಟ್ಟ ಈ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು.
Cross references
- Ezekiel 45:4 ಯೆಹೆಜ್ಕೇಲನು 45:4ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.
- Ezekiel 44:28 ಯೆಹೆಜ್ಕೇಲನು 44:28ಇದು ಅವರಿಗೆ ಬಾಧ್ಯತೆಯಾಗಿರುವದು; ನಾನೇ ಅವರಿಗೆ ಬಾಧ್ಯನಾಗಿ ರುವೆನು; ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯ ವನ್ನು ಕೊಡಬಾರದು ಯಾಕಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.
- Joshua 21:1–45 ಯೆಹೋಶುವ 21:1–45ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ-- ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು. ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ-- ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು. ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು. ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು. ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು. ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು. ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು. ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು. ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು, ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ; ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ. ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು. ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು. ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು. ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು. ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು. ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು. ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
- 1 Corinthians 9:13–14 1 ಕೊರಿಂಥದವರಿಗೆ 9:13–14ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- Matthew 10:10 ಮತ್ತಾಯನು 10:10ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
- Numbers 35:1–9 ಅರಣ್ಯಕಾಂಡ 35:1–9ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ-- ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು. ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು. ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು. ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು. ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು. ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು. ಕರ್ತನು ಮೋಶೆಯ ಸಂಗಡ ಮಾತನಾಡಿ--
Original words (Hebrew)
- priests · H3548כֹּהֵן kôhên
- holy · H6944קֹדֶשׁ qôdesh
- oblation · H8641תְּרוּמָה tᵉrûwmâh
- north · H6828צָפוֹן tsâphôwn
- five · H2568חָמֵשׁ châmêsh
- twenty · H6242עֶשְׂרִים ʻesrîym
- thousand · H505אֶלֶף ʼeleph
- west · H3220יָם yâm
- ten · H6235עֶשֶׂר ʻeser
- thousand · H505אֶלֶף ʼeleph
- breadth · H7341רֹחַב rôchab
- east · H6921קָדִים qâdîym
- ten · H6235עֶשֶׂר ʻeser
- thousand · H505אֶלֶף ʼeleph
- breadth · H7341רֹחַב rôchab
- south · H5045נֶגֶב negeb
- five · H2568חָמֵשׁ châmêsh
- twenty · H6242עֶשְׂרִים ʻesrîym
- thousand · H505אֶלֶף ʼeleph
- length · H753אֹרֶךְ ʼôrek
- sanctuary · H4720מִקְדָּשׁ miqdâsh
- midst · H8432תָּוֶךְ tâvek