Ezekiel · chapter 48 · verse 19
Ezekiel 48:19 in Kannada
ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು.
Pattanadalli seve maaduvavaru israayelina ellaa gotragalinda adaralliye sevemaadabeku.
Ezekiel 48:19 in English
- King James Version (KJV)
- And they that serve the city shall serve it out of all the tribes of Israel.
- World English Bible (WEB)
- Those who labor in the city, out of all the tribes of Israel, shall cultivate it.
- American Standard Version (ASV)
- And they that labor in the city, out of all the tribes of Israel, shall till it.
- Bible in Basic English (BBE)
- It will be farmed by workers of the town from all the tribes of Israel.
- Darby Translation (DBY)
- And they that serve the city shall serve it out of all the tribes of Israel.
- Webster's Bible (WBS)
- And they that serve the city shall serve it out of all the tribes of Israel.
- Young's Literal Translation (YLT)
- even [to] him who is serving the city, they serve it out of all the tribes of Israel.
Read in context
- 17ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು: ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ; ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ; ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ; ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ.
- 18ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು.
- 19ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು.
- 20ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.
- 21ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.
Cross references
- 1 Kings 4:7–23 1 ಅರಸುಗಳು 4:7–23ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು. ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು; ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್, ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು. ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು. ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು. ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು. ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು. ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು. ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು; ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು; ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು. ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು. ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು. ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು. ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
- Ezekiel 45:6 ಯೆಹೆಜ್ಕೇಲನು 45:6ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು.
- Nehemiah 11:1–36 ನೆಹೆಮೀಯ 11:1–36ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು. ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು. ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ-- ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು. ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ, ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು. ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು. ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು. ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು. ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು. ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು. ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ. ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ. ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು; ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು. ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು. ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು. ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು. ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು. ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು; ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು. ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು. ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂ ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂ ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂ ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು. ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ ಅನಾತೋತು ನೋಬು ಅನನ್ಯವು ಹಾಚೋರು ರಾಮಾವು ಗಿತ್ತಯಿಮ್ ಹಾದೀದು ಚೆಬೋ ಯಾಮ್ ನೆಬಲ್ಲಾಟು ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು. ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.