Ezekiel · chapter 5 · verse 8
Ezekiel 5:8 in Kannada
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
Devaraada kartanu heege heluttaane--igo, naanu, naane, ninage virodhavaagiddene; janaangagala kannugala munde ninna madhyadalli nyaayateerpannu maaduttene.
Ezekiel 5:8 in English
- King James Version (KJV)
- Therefore thus saith the Lord GOD; Behold, I, even I, [am] against thee, and will execute judgments in the midst of thee in the sight of the nations.
- World English Bible (WEB)
- therefore the Lord GOD says: ‘Behold, I, even I, am against you; and I will execute judgments among you in the sight of the nations.
- American Standard Version (ASV)
- therefore thus saith the Lord Jehovah: Behold, I, even I, am against thee; and I will execute judgments in the midst of thee in the sight of the nations.
- Bible in Basic English (BBE)
- For this cause the Lord has said: See, I, even I, am against you; and I will be judging among you before the eyes of the nations.
- Darby Translation (DBY)
- therefore thus saith the Lord Jehovah: Behold, I, even I, am against thee, and will execute judgments in the midst of thee in the sight of the nations;
- Webster's Bible (WBS)
- Therefore thus saith the Lord GOD; Behold, I, even I, [am] against thee, and will execute judgments in the midst of thee in the sight of the nations.
- Young's Literal Translation (YLT)
- Therefore, thus said the Lord Jehovah: Lo, I [am] against thee, even I, And I have done in thy midst judgments, Before the eyes of the nations.
Read in context
- 6ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.
- 7ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು, ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದದ್ದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ ನನ್ನ ನ್ಯಾಯಗಳನ್ನು ಪಾಲಿಸದೆ ಇದ್ದದರಿಂದಲೂ ನಿಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ
- 8ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
- 9ನಾನು ಮಾಡದೇ ಇದ್ದದ್ದನ್ನೂ ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿನ್ನ ಅಸಹ್ಯಗಳ ನಿಮಿತ್ತ ವಾಗಿ ನಿನ್ನಲ್ಲಿ ಮಾಡುತ್ತೇನೆ.
- 10ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
Cross references
- Ezekiel 15:7 ಯೆಹೆಜ್ಕೇಲನು 15:7ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 24:9 ಯೆರೆಮೀಯ 24:9ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Jeremiah 21:5 ಯೆರೆಮೀಯ 21:5ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
- Ezekiel 21:3 ಯೆಹೆಜ್ಕೇಲನು 21:3ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
- Jeremiah 21:13 ಯೆರೆಮೀಯ 21:13ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
- 1 Kings 9:8–9 1 ಅರಸುಗಳು 9:8–9ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು. ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- Ezekiel 11:9 ಯೆಹೆಜ್ಕೇಲನು 11:9ನಾನು ನಿಮ್ಮನ್ನು ಅದರ ಮಧ್ಯದಿಂದ ಹೊರಗೆ ತೆಗೆದು ನಿಮ್ಮನ್ನು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನಿಮ್ಮಲ್ಲಿ ನ್ಯಾಯ ತೀರ್ಪುಗಳನ್ನು ನಡಿಸುವೆನು.
- Jeremiah 50:7 ಯೆರೆಮೀಯ 50:7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
- Leviticus 26:17–46 ಯಾಜಕಕಾಂಡ 26:17–46ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ. ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು. ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ. ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು. ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು. ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು. ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು. ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Lamentations 2:5 ಪ್ರಲಾಪಗಳು 2:5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
- Deuteronomy 29:23–28 ಧರ್ಮೋಪದೇಶಕಾಂಡ 29:23–28ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Ezekiel 28:22 ಯೆಹೆಜ್ಕೇಲನು 28:22ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.