Ezekiel · chapter 7 · verse 21
Ezekiel 7:21 in Kannada
ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.
Naanu adannu aparichitara kaige kolleyaagiyoo bhoomiya dushtarige sooreyaagiyoo oppisuvenu mattu avaru adannu apavitrapadisuvaru.
Ezekiel 7:21 in English
- King James Version (KJV)
- And I will give it into the hands of the strangers for a prey, and to the wicked of the earth for a spoil; and they shall pollute it.
- World English Bible (WEB)
- I will give it into the hands of the strangers for a prey, and to the wicked of the earth for a plunder; and they will profane it.
- American Standard Version (ASV)
- And I will give it into the hands of the strangers for a prey, and to the wicked of the earth for a spoil; and they shall profane it.
- Bible in Basic English (BBE)
- And I will give it into the hands of men from strange lands who will take it by force, and to the evil-doers of the earth to have for themselves; and they will make it unholy.
- Darby Translation (DBY)
- And I will give it into the hands of strangers for a prey, and to the wicked of the earth for a spoil; and they shall profane it.
- Webster's Bible (WBS)
- And I will give it into the hands of the strangers for a prey, and to the wicked of the earth for a spoil; and they shall pollute it.
- Young's Literal Translation (YLT)
- And I have given it into the hand of the strangers for a prey, And to the wicked of the land for a spoil, And they have polluted it.
Read in context
- 19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
- 20ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
- 21ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.
- 22ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
- 23ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
Cross references
- 2 Kings 24:13 2 ಅರಸುಗಳು 24:13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- Psalm 74:2–8 ಕೀರ್ತನೆಗಳು 74:2–8ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ. ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು. ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ. ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ; ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ. ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ. ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
- Jeremiah 52:13–23 ಯೆರೆಮೀಯ 52:13–23ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು; ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು. ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು. ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು. ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು. ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು. ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು. ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು. ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು; ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
- 2 Chronicles 36:18–19 2 ಪೂರ್ವಕಾಲವೃತ್ತಾಂತ 36:18–19ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
- 2 Kings 25:13–16 2 ಅರಸುಗಳು 25:13–16ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು. ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು. ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು. ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
- 2 Kings 25:9 2 ಅರಸುಗಳು 25:9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.