Ezekiel · chapter 7 · verse 27
Ezekiel 7:27 in Kannada
ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Arasanu duhkhisuvanu, pradhaananu nirgatikanaa guvanu; deshada janara kaigalu tondaregollu vavu; avara maargagala prakaara avara haageye maaduvenu; avara nyaayagala prakaara avarige nyaayateerisuvenu. Naane kartanendu avarige tiliyuvadu.
Ezekiel 7:27 in English
- King James Version (KJV)
- The king shall mourn, and the prince shall be clothed with desolation, and the hands of the people of the land shall be troubled: I will do unto them after their way, and according to their deserts will I judge them; and they shall know that I [am] the LORD.
- World English Bible (WEB)
- The king will mourn, and the prince will be clothed with desolation. The hands of the people of the land will be troubled. I will do to them after their way, and according to their own judgments I will judge them. Then they will know that I am the LORD.’”
- American Standard Version (ASV)
- The king shall mourn, and the prince shall be clothed with desolation, and the hands of the people of the land shall be troubled: I will do unto them after their way, and according to their deserts will I judge them; and they shall know that I am Jehovah.
- Bible in Basic English (BBE)
- The king will give himself up to sorrow, and the ruler will be clothed with wonder, and the hands of the people of the land will be troubled: I will give them punishment for their ways, judging them as it is right for them to be judged; and they will be certain that I am the Lord.
- Darby Translation (DBY)
- The king shall mourn, and the prince shall be clothed with dismay, and the hands of the people of the land shall tremble: I will do unto them according to their way, and with their judgments will I judge them; and they shall know that I [am] Jehovah.
- Webster's Bible (WBS)
- The king shall mourn, and the prince shall be clothed with desolation, and the hands of the people of the land shall be troubled: I will do to them after their way, and according to their deserts will I judge them, and they shall know that I [am] the LORD.
- Young's Literal Translation (YLT)
- The king doth become a mourner, And a prince putteth on desolation, And the hands of the people of the land are troubled, From their own way I deal with them, And with their own judgments I judge them, And they have known that I [am] Jehovah!'
Read in context
- 25ನಾಶವು ಬರುತ್ತದೆ ಮತ್ತು ಅವರು ಸಮಾಧಾನವನ್ನು ಹುಡುಕುತ್ತಾರೆ; ಆದರೆ ಅದು ಇರುವದಿಲ್ಲ.
- 26ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 27ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Cross references
- Ezekiel 7:4–8 ಯೆಹೆಜ್ಕೇಲನು 7:4–8ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು. ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು. ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ. ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
- Ezekiel 18:30 ಯೆಹೆಜ್ಕೇಲನು 18:30ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Ezekiel 12:10–22 ಯೆಹೆಜ್ಕೇಲನು 12:10–22ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ. ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು. ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು. ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು. ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು. ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು. ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ನಿನ್ನ ರೊಟ್ಟಿ ಯನ್ನು ನಡುಕದಿಂದ ತಿನ್ನು ಮತ್ತು ನೀರನ್ನು ದಿಗಿಲಿ ನಿಂದಲೂ ಎಚ್ಚರಿಕೆಯಿಂದಲೂ ಕುಡಿ. ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು. ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ. ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇ ನಂದರೆ-- ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Ezekiel 17:15–21 ಯೆಹೆಜ್ಕೇಲನು 17:15–21ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು. ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು. ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
- Romans 2:5–10 ರೋಮಾಪುರದವರಿಗೆ 2:5–10ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
- Ezekiel 21:25 ಯೆಹೆಜ್ಕೇಲನು 21:25ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.
- Jeremiah 52:8–11 ಯೆರೆಮೀಯ 52:8–11ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- Psalm 9:16 ಕೀರ್ತನೆಗಳು 9:16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- 1 Kings 20:28 1 ಅರಸುಗಳು 20:28ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
- Ezekiel 26:16 ಯೆಹೆಜ್ಕೇಲನು 26:16ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
Original words (Hebrew)
- king · H4428מֶלֶךְ melek
- mourn · H56אָבַל ʼâbal
- prince · H5387נָשִׂיא nâsîyʼ
- clothed · H3847לָבַשׁ lâbash
- desolation · H8077שְׁמָמָה shᵉmâmâh
- hands · H3027יָד yâd
- people · H5971עַם ʻam
- land · H776אֶרֶץ ʼerets
- troubled · H926בָּהַל bâhal
- do · H6213עָשָׂה ʻâsâh
- way · H1870דֶּרֶךְ derek
- deserts · H4941מִשְׁפָּט mishpâṭ
- judge · H8199שָׁפַט shâphaṭ
- know · H3045יָדַע yâdaʻ