Ezekiel · chapter 8 · verse 4
Ezekiel 8:4 in Kannada
ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.
Igo, israa yelina devara mahimeyu naanu aa bayalu seemeyalli nodida aakaarada prakaa rave alli ittu.
Ezekiel 8:4 in English
- King James Version (KJV)
- And, behold, the glory of the God of Israel [was] there, according to the vision that I saw in the plain.
- World English Bible (WEB)
- Behold, the glory of the God of Israel was there, according to the appearance that I saw in the plain.
- American Standard Version (ASV)
- And, behold, the glory of the God of Israel was there, according to the appearance that I saw in the plain.
- Bible in Basic English (BBE)
- And I saw the glory of the Lord there, as in the vision which I saw in the valley.
- Darby Translation (DBY)
- And behold, the glory of the God of Israel was there, according to the appearance that I saw in the valley.
- Webster's Bible (WBS)
- And behold, the glory of the God of Israel [was] there, according to the vision that I saw in the plain.
- Young's Literal Translation (YLT)
- and lo, there the honour of the God of Israel, as the appearance that I saw in the valley.
Read in context
- 2ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು.
- 3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- 4ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.
- 5ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು.
- 6ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.
Cross references
- Ezekiel 3:22–23 ಯೆಹೆಜ್ಕೇಲನು 3:22–23ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು. ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.
- Ezekiel 1:26–28 ಯೆಹೆಜ್ಕೇಲನು 1:26–28ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು. ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- 2 Corinthians 4:4–6 2 ಕೊರಿಂಥದವರಿಗೆ 4:4–6ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Exodus 40:34–35 ವಿಮೋಚನಕಾಂಡ 40:34–35ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- Ezekiel 43:2–4 ಯೆಹೆಜ್ಕೇಲನು 43:2–4ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು. ಇದು, ನಾನು ನೋಡಿದ ದರ್ಶನದ ತೋರ್ವಿಕೆಯ ಪ್ರಕಾರ ಇತ್ತು ನಾನು ಪಟ್ಟಣವನ್ನು ನಾಶಮಾಡುವದಕ್ಕೆ ಬಂದಾಗ ನೋಡಿದ ಆ ದರ್ಶನದ ಹಾಗೆಯೇ ಇತ್ತು; ನಾನು ಕೇಬಾರ್ ನದಿಯ ದಡದ ಮೇಲೆ ನೋಡಿದ ದರ್ಶನಗಳ ಹಾಗೆ ಇತ್ತು; ಆಗ ನಾನು ಬೋರಲು ಬಿದ್ದೆನು. ಆಗ ಕರ್ತನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿ ಸಿತು.
- Exodus 25:22 ವಿಮೋಚನಕಾಂಡ 25:22ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- Ezekiel 9:3 ಯೆಹೆಜ್ಕೇಲನು 9:3ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
- Ezekiel 10:1–4 ಯೆಹೆಜ್ಕೇಲನು 10:1–4ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು. ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು. ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.
- Ezekiel 11:22–23 ಯೆಹೆಜ್ಕೇಲನು 11:22–23ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು, ಅವರ ಪಕ್ಕದಲ್ಲಿ ಚಕ್ರಗಳಿದ್ದವು; ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು. ಕರ್ತನ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ ಪಟ್ಟಣದ ಮೂಡಣದಲ್ಲಿರುವ ಪರ್ವತದ ಮೇಲೆ ನಿಂತಿತು.